ಚಿಕ್ಕಬಳ್ಳಾಪುರ: 13 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ 25 ವರ್ಷದ ಯುವಕನೋರ್ವ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.
ಸರ್ಕಾರಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಮನೆಯ ಎದುರಗಡೆಯಲ್ಲೇ ಇದ್ದ ತಂಪು ಪಾನೀಯಗಳ ಹಂಚಿಕೆದಾರನೋರ್ವ ತಂಪು ಪಾನೀಯಗಳ ಸಂಗ್ರಹಿಸುವ ಗೋದಾಮಿಗೆ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ.
Advertisement
Advertisement
ಈ ಸಂಬಂಧ ಬಾಲಕಿಯ ಪೋಷಕರು ಬಾಗೇಪಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಸದ್ಯ ಸಂತ್ರಸ್ತೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆರೋಪಿ ಕಾಮುಕ ಯುವಕನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.