ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕ ಸುಧಾಕರ್ ಅವರ ಬಂಡಾಯಕ್ಕೆ ಮಣಿದಿರುವ ಮುಖ್ಯಮಂತ್ರಿಗಳು ದಿಡೀರ್ ಬೆಳವಣಿಗೆಯಲ್ಲಿ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‍ಪಿಸಿಬಿ) ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಇಂದು ಬೆಳಗ್ಗೆ ಮಂಡಳಿಯ ಅಧ್ಯಕ್ಷರಾಗಿದ್ದ ಸಿ. ಜಯರಾಮ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಜಯರಾಮ್ ರಿಂದ ತೆರವಾದ ಅಧ್ಯಕ್ಷ ಸ್ಥಾನ ಶಾಸಕ ಸುಧಾಕರ್ ಅವರಿಗೆ ನೀಡಲಾಗಿದೆ.
Advertisement
I thank my leader AICC president Rahul Gandhi ji, My leader Siddaramaiah ji, Chief Minister Kumaraswamy ji,AICC Gen Sec KC Venugopal ji, DCM G Parameshwar ji, KPCC Pres Dinesh Gundu Rao ji & all my party colleagues who have vested their belief in me to chair the KSPCB. pic.twitter.com/Bq3vCyeKF4
— Dr Sudhakar K (@mla_sudhakar) June 20, 2019
Advertisement
ಕಳೆದ ನಾಲ್ಕು ತಿಂಗಳ ಹಿಂದೆಯೇ ಶಾಸಕ ಸುಧಾಕರ್ ಅವರನ್ನು ಮಾಲಿನ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸ್ಸು ಮಾಡಿ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿಗಳಿಗೆ ಪಟ್ಟಿಯನ್ನು ರವಾನೆ ಮಾಡಿತ್ತು. ಆದರೆ ಈ ಸ್ಥಾನಕ್ಕೆ ತಜ್ಞರನ್ನಷ್ಟೇ ನೇಮಕ ಮಾಡಬೇಕೆಂಬ ಅಂಶವನ್ನು ಮುಂದಿಟ್ಟಿದ್ದ ಸಿಎಂ, ಸುಧಾಕರ್ ಅವರ ನೇಮಕವನ್ನು ತಡೆ ಹಿಡಿದಿದ್ದರು. ಆ ಬಳಿಕ ಶಾಸಕ ಸುಧಾಕರ್ ಅವರು ಸಿಎಂ ಅವರ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು.
Advertisement
ಮೈತ್ರಿ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದ್ದ ಈ ಅಂಶಕ್ಕೆ ಸುಧಾಕರ್ ರನ್ನು ನೇಮಕ ಮಾಡುವ ಮೂಲಕ ಸಿಎಂ ತೆರೆ ಎಳೆದಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಬಂಡಾಯ ನಾಯಕರ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್ ಅವರು, ಮಾಜಿ ಸಿಎಂ ಎಸ್‍ಎಂ ಕೃಷ್ಣ ಅವರ ಮನೆಯಲ್ಲೂ ಕಾಣಿಸಿಕೊಂಡಿದ್ದರು.
Advertisement
ಇದೆಲ್ಲವುದರ ಜೊತೆಗೆ ಸುಧಾಕರ್ ಅವರು ಪಕ್ಷದ ಬಂಡಾಯ ಪಟ್ಟಿಯಲ್ಲಿ ಕಾಣಿಸಿಕೊಳ್ಳುವುದರೊಂದಿಗೆ ಕ್ಷೇತ್ರದಲ್ಲಿ ಕಾರ್ಯಕರ್ತರ ಗುಪ್ತ ಸಭೆಗಳನ್ನು ನಡೆಸಿದ್ದರು. ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಎಂಬ ಅನುಮಾನಕ್ಕೆ ಪುಷ್ಠಿ ನೀಡುವಂತೆ ಸದ್ದಿಲ್ಲದೇ ಶಾಸಕ ಸುಧಾಕರ್ ತಂದೆ ಪಿ.ಎನ್ ಕೇಶವರೆಡ್ಡಿ ಕೆಲ ರಹಸ್ಯ ಸಭೆಗಳನ್ನು ನಡೆಸಿದ್ದರು. ಸತತ ಎರಡನೇ ಬಾರಿಗೆ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಸುಧಾಕರ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದರು. ಆದರೆ ಸಚಿವ ಸ್ಥಾನ ಅವರಿಗೆ ಸಿಕ್ಕಿರಲಿಲ್ಲ. ಅಲ್ಲದೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಕೇಶವರೆಡ್ಡಿ ಅವರು, ಮೊದಲ ಬಾರಿ ಗೆದ್ದರು ವರಿಷ್ಠರ ಮಕ್ಕಳಿಗೆ ಸಚಿವ ಸ್ಥಾನ ಕೊಡುತ್ತಾರೆ. ಆದರೆ ಎರಡು ಬಾರಿ ಗೆದ್ದರು ನನ್ನ ಮಗನಿಗೆ ಸಚಿವ ಸ್ಥಾನ ಇಲ್ಲ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ತಂದ ಅನುದಾನ, ಸುಧಾಕರ್ ಮಾಡಿದ ಅಭಿವೃದ್ಧಿ ಕೆಲಸಗಳು ಸದ್ಯ ಸಮ್ಮಿಶ್ರ ಸರ್ಕಾರದಲ್ಲಿ ಮಾಡಲಾಗುತ್ತಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಕೆಲ ನಾಯಕರು ಸ್ವಾರ್ಥಕ್ಕಾಗಿ ಜೆಡಿಎಸ್ ಪಕ್ಷದ ಜೊತೆ ಕೈ ಜೋಡಿಸಿದ್ದಾರೆ ಎಂದು ಮೈತ್ರಿ ಪಕ್ಷದ ವಿರುದ್ಧ ಗುಡುಗಿದರು. ಈ ಎಲ್ಲ ಬೆಳವಣಿಗೆಗಳ ನಡುವಯೇ ಸುಧಾಕರ್ ಅವರಿಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]