ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆ (Nandi Hills Road) ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಮಾಡಿದ್ದಾರೆ.
ಅಂದ ಹಾಗೆ ವಾರಾಂತ್ಯದ ದಿನಗಳಲ್ಲಿ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 08 ಗಂಟೆ ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದನ್ನೂ ಓದಿ: IPL 2025 | ಆರ್‌ಸಿಬಿ vs ಕೆಕೆಆರ್ ನಡುವಿನ ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ
ಉಳಿದಂತೆ ವಾರದ ಐದೂ ದಿನಗಳು ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಮಾರ್ಚ್ 24 ರಿಂದ ಏಪ್ರಿಲ್ 25ರ ವರೆಗೂ 1 ತಿಂಗಳು 4 ವಾರಗಳ ಕಾಲ ನಿರ್ಬಂಧ ಇರಲಿದೆ. ನಂದಿಬೆಟ್ಟದ ತಪ್ಪಲಿನಿಂದ ಬೆಟ್ಟದವರೆಗೂ 7.70 ಕಿಲೋಮೀಟರ್ ದೂರದ ರಸ್ತೆ ಕಾಮಗಾರಿ ನಡೆಯಲಿದೆ.
ಅಂಕುಡೊಂಕಿನ ಕಿರಿದಾದ ರಸ್ತೆ ಕಾರಣ ರಸ್ತೆ ಕಾಮಗಾರಿಗೆ ಆಡಚಣೆ ಆಗಲಿದ್ದು, ಮುಂಜಾಗ್ರತಾ ಕ್ರಮವಾಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಕುಡಿದ ಮತ್ತಲ್ಲಿ ಹುಚ್ಚಾಟ – ತಮಾಷೆಗೆ 40 ಕಿಮೀ ದೂರದಿಂದ ಅಂಬುಲೆನ್ಸ್ ಕರೆಸಿದ ಕುಡುಕ!