ಚಿಕ್ಕಬಳ್ಳಾಪುರ: 6ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿದ ಇಬ್ಬರು ಕಿಡಿಗೇಡಿಗಳು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಅದನ್ನು ವಿಡಿಯೋ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ರಜಾದಿನದಂದು ಯಾರೂ ಇಲ್ಲದ ವೇಳೆ ಶಾಲೆಯ ಬಳಿ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿರುವ ಪಿಯುಸಿ ವಿದ್ಯಾರ್ಥಿಗಳು ಈ ಕೃತ್ಯದಲ್ಲಿ ನಡೆಸಿದ್ದಾರೆ. ಒಬ್ಬ ವಿದ್ಯಾರ್ಥಿ ಅಪ್ರಾಪ್ತೆಯ ಜೊತೆ ಲೈಂಗಿಕ ದೌರ್ಜನ್ಯ ನಡೆಸುತ್ತ ಅತ್ಯಾಚಾರಕ್ಕೆ ಯತ್ನಿಸಿದ್ದು, ಮತ್ತೋರ್ವ ವಿದ್ಯಾರ್ಥಿ ಅದನ್ನ ತನ್ನ ಮೊಬೈಲ್ ಮೂಲಕ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದಾನೆ.
ಈ ಘಟನೆ ನಡೆದ ಹಲವು ದಿನಗಳ ನಂತರ ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದು, ವಿಡಿಯೋ ಬಯಲಿಗೆ ಬಂದ ನಂತರ ವಿಡಿಯೋ ಕಂಡ ಅಪ್ರಾಪ್ತ ಬಾಲಕಿಯ ಪೋಷಕರು ಕೃತ್ಯ ಎಸಗಿದ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಕೃತ್ಯ ನಡೆಸಿದ ಇಬ್ಬರು ಬಾಲಕರು ಹಾಗೂ ಸಂತ್ರಸ್ತೆ ಸಹಿತ ಅಪ್ರಾಪ್ತರಾಗಿದ್ದು ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.