ಚಿಕ್ಕಬಳ್ಳಾಪುರ: ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಮಹಿಳೆಯೊಬ್ಬರು ಚೆನ್ನಾಗಿ ಹೊಡೆದು ಬುದ್ದಿಕಲಿಸಿದ್ದಾರೆ.
ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೊಬ್ಬ ಕಾಮುಕ ಒಂಟಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಮಹಿಳೆ ಕಾಮುಕನ ತಲೆಗೆ ಗಂಭೀರವಾದ ಗಾಯ ಮಾಡಿ ತಮ್ಮನ್ನು ರಕ್ಷಣೆ ಮಾಡಿಕೊಂಡಿದ್ದಾರೆ.ಇದನ್ನೂ ಓದಿ:ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು – ಸಹೋದ್ಯೋಗಿಗಳಿಗೆ ಸಿಎಂ ಮೆಚ್ಚುಗೆ
ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ಠಾಣೆಗೆ ಸೇರಿದ ಗ್ರಾಮವೊಂದರ ಮಹಿಳೆ ಹೊಲದಲ್ಲಿ ಕಳೆ ಕೀಳುತ್ತಿದ್ದಾಗ ಅದೇ ಗ್ರಾಮದ 30 ವರ್ಷದ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಕಳೆ ಕೀಳುತ್ತಿದ್ದ ಆಯುಧದ ಮೂಲಕವೇ ಆತನ ತಲೆಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ.ಇದನ್ನೂ ಓದಿ:ಕಾರು ಅಪಘಾತಕ್ಕೂ ಮುನ್ನ ಮದ್ಯ ಖರೀದಿಸಿದ್ದ ಇಷಿತಾ, ಬಿಂದು
ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಸಂತ್ರಸ್ತೆ ಹಾಗೂ ಆರೋಪಿತ ಇಬ್ಬರು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಇದನ್ನೂ ಓದಿ:ಹೆಲಿಕಾಪ್ಟರ್ ಗೆ ಮೃತ ದೇಹವನ್ನು ನೇತು ಹಾಕಿ ಹಾರಾಟ – ಮತ್ತೆ ಶುರುವಾಯ್ತು ಉಗ್ರರ ಅಟ್ಟಹಾಸ