ಚಿಕ್ಕಬಳ್ಳಾಪುರದಲ್ಲಿ ನಡೆದ ಆರೋಗ್ಯ ಮೇಳ ಜಾಗತಿಕ ದಾಖಲೆ ಬರೆದಿದೆ: ಅರುಣ್ ಸಿಂಗ್ ಶ್ಲಾಘನೆ

SUDHKAR AND ARUN SINGH 1

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಡೆದ ಎರಡು ದಿನಗಳ ಆರೋಗ್ಯ ಮೇಳ ಜಾಗತಿಕ ದಾಖಲೆ ಬರೆದಿದೆ. ಪ್ರಧಾನ ಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರ ಮೆಚ್ಚಿ ಶ್ಲಾಘಿಸುವಂತ ಮೇಳ ಇದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕಾರ್ಯಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ  ಅರುಣ್ ಸಿಂಗ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

SUDHKAR AND ARUN SINGH 4
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಡಾ.ಕೆ.ಸುಧಾಕರ್ ಫೌಂಡೇಶನ್ ಸಹಯೋಗದಲ್ಲಿ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿತ್ತು. ಚಿಕ್ಕಬಳ್ಳಾಪುರ ನಗರದ ಹೊರವಲಯದ ಎಸ್‍ಜೆಸಿಐಟಿ ಕಾಲೇಜ್ ಆವರಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಆರೋಗ್ಯ ಮೇಳದ ಎರಡನೇ ದಿನವಾದ ಇಂದು ಅರುಣ್ ಸಿಂಗ್ ಭೇಟಿ ನೀಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ದಲಿತ ಸಿಎಂ ಆಗ್ತಾರೆ ಅಂತ ಕನಸು ಕಾಣೋನು ಹುಚ್ಚ: ಎ.ನಾರಾಯಣಸ್ವಾಮಿ

SUDHKAR AND ARUN SINGH 2

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅರುಣ್‍ಸಿಂಗ್, ಒಂದೇ ಸೂರಿನಡಿ ತಪಾಸಣೆ, ಚಿಕಿತ್ಸೆ, ಔಷಧ ವಿತರಣೆ ಮತ್ತು ಶಸ್ತ್ರಚಿಕಿತ್ಸೆಯಂತಹ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಲಕ್ಷಾಂತರ ಜನರಿಗೆ ಕಲ್ಪಿಸಲಾಗಿದೆ. ಉಚಿತವಾಗಿ ಊಟ ಮತ್ತು ಸಾರಿಗೆ ಮತ್ತಿತರ ಸೌಲಭ್ಯಗಳೊಂದಿಗೆ ಆರೋಗ್ಯ ಮೇಳ ನಡೆಸುವುದು ಸುಲಭದ ಕೆಲಸವಲ್ಲ. ಇಂತಹ ಬೃಹತ್ ಮೇಳ ಈ ಹಿಂದೆ ನಡೆದಿರಲು ಸಾಧ್ಯವಿಲ್ಲ. ಯೋಜಿತವಾಗಿ ದೂರದೃಷ್ಟಿಯಿಂದ ಬಡವರು ಮತ್ತು ಮಧ್ಯಮ ವರ್ಗದ ಮುಖ್ಯವಾಗಿ ಗ್ರಾಮೀಣ ಜನರಿಗೆ ವಿವಿಧ ವೈದ್ಯಕೀಯ ಸೇವೆ ಸೌಲಭ್ಯಗಳನ್ನು ಉಚಿತವಾಗಿ ತಲುಪಿಸಲು ಆಯೋಜಿಸಿರುವ ಈ ಆರೋಗ್ಯ ಮೇಳ ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಸರ್ಕಾರದ ಮಹತ್ವದ ಆಯುಷ್ಮಾನ್ ಭಾರತ್ ಕಾರ್ಡ್‍ಗಳ ನೋಂದಣಿಯೂ ಬಹುದೊಡ್ಡ ಪ್ರಮಾಣದಲ್ಲಿ ಆಗುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಹಿಂಭಾಗದಲ್ಲಿ ಹಿಂದೂ ದೇವಾಲಯ ಇರಬಹುದು: ಶ್ರೀಶೈಲ ಶ್ರೀ

SUDHKAR AND ARUN SINGH 3

ಡಾ.ಕೆ.ಸುಧಾಕರ್ ಮಾತನಾಡಿ. ಚಿಕ್ಕಬಳ್ಳಾಪುರದಲ್ಲಿ ಪ್ರಾಯೋಗಿಕವಾಗಿ ಆಯೋಜಿಸಿರುವ ಎರಡು ದಿನಗಳ ಬೃಹತ್ ಆರೋಗ್ಯ ಮೇಳ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿ ಜಾಗತಿಕ ಮಟ್ಟದ ದಾಖಲೆಯನ್ನು ಬರೆದಿದೆ. ಈ ಪ್ರಯೋಗವನ್ನು ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆಸಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Comments

Leave a Reply

Your email address will not be published. Required fields are marked *