ChikkamagaluruCrimeDistrictsKarnatakaLatestLeading NewsMain Post

ಸಿ.ಟಿ.ರವಿ ಸ್ವಗ್ರಾಮದ ಯುವಕರಿಂದ ಸಿದ್ದರಾಮಯ್ಯ ವಿರುದ್ಧ ದೂರು

ಚಿಕ್ಕಮಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸ್ವಗ್ರಾಮದ ಯುವಕರು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದಾರೆ.

ಚಿಕ್ಕಮಗಳೂರಿನ ಜಿಲ್ಲಾ ಬಿಜೆಪಿಯಿಂದ ಘಟಕದವರೂ ಆಗಿರುವ ಸಿ.ಟಿ.ರವಿ ಸ್ವಗ್ರಾಮ ಚಿಕ್ಕಮಾಗರಹಳ್ಳಿ ಯುವಕರು ಇಂದು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ ಅವರು ರಾಷ್ಟ್ರಧ್ವಜದ ಬಣ್ಣ ಕೇಸರಿ, ಬಿಳಿ, ಹಸಿರು ಎನ್ನುವ ಬದಲಿಗೆ ಕೆಂಪು, ಬಿಳಿ, ಹಸಿರು ಎಂದಿದ್ದು, ಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಬೆಟ್ಟಕ್ಕೆ ತೆರಳಿದ್ದ ಮಹಿಳೆ ಅನುಮಾನಸ್ಪದ ಸಾವು – ಅಪಘಾತವೆಂದು ಆಸ್ಪತ್ರೆಗೆ ಸೇರಿಸಿದ್ದ ಲವರ್‌

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಹರ್ ಘರ್ ತಿರಂಗಾ ಅಭಿಯಾನದ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ಬಾವುಟದ ಬಣ್ಣ ಕೇಸರಿ, ಬಿಳಿ, ಹಸಿರು ಎನ್ನುವ ಬದಲಿಗೆ ಕೆಂಪು, ಬಿಳಿ, ಹಸಿರು ಎಂದು ಹೇಳಿದ್ದರು. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆ – ಶೇ.40 ರಿಂದ 70ರಷ್ಟು ಮರಣ ಸಾಧ್ಯತೆ

ಮುಂದುವರಿದು ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನವು ಕಾಂಗ್ರೆಸ್‌ನಿಂದಲೇ ಆಗಿದೆ. ಇಡೀ ದೇಶವೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ಗಾಂಧೀಜಿ, ತಿಲಕರು ಸೇರಿದಂತೆ ಇನ್ನಿತರ ನಾಯಕರು ದೇಶಕ್ಕಾಗಿ ಮಾಡಿದ ತ್ಯಾಗ ಬಲಿದಾನದಿಂದ ಸ್ವಾತಂತ್ರ‍್ಯ ಬಂದಿದೆ. ತ್ಯಾಗ, ಶಾಂತಿ, ಸಮೃದ್ಧಿ ಈ ಬಾವುಟದ ಸಂಕೇತವಾಗಿದ್ದು, ಇದೇ ಧ್ವಜವನ್ನು ಸಾವರ್ಕರ್ ವಿರೋಧ ಮಾಡಿದ್ದರು ಎಂದ ಅವರು, ರಾಷ್ಟ್ರ ಧ್ವಜ ಬಣ್ಣ ಕೆಂಪು, ಬಿಳಿ, ಹಸಿರು ಎಂದು ತಪ್ಪಾಗಿ ಹೇಳಿದ್ದರು.

Live Tv

Leave a Reply

Your email address will not be published.

Back to top button