ಚಿಕ್ಕಮಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‍ಗೆ ಚಿಕ್ಕಮಗಳೂರು ಜೆಎಂಎಫ್‍ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ದೀಪಕ್ ಮಯೂರ್ ಎಂಬವರು ಸುದೀಪ್ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
Advertisement
ಕಿಚ್ಚ ಸುದೀಪ್ ಖಾಸಗಿ ವಾಹಿನಿಯಲ್ಲಿ ‘ವಾರಸ್ದಾರ’ ಧಾರಾವಾಹಿಯನ್ನು ನಿರ್ಮಾಣ ಮಾಡಿದ್ದರು. ಈ ಧಾರಾವಾಹಿಯ ಶೂಟಿಂಗ್‍ಗಾಗಿ ಸುದೀಪ್ ದೀಪಕ್ ಅವರ ಮನೆ ಹಾಗೂ ತೋಟವನ್ನು ಬಾಡಿಗೆಗೆ ಪಡೆದುಕೊಂಡಿದ್ದರು.
Advertisement
Advertisement
ದೀಪಕ್ ಅವರು ಬಾಡಿಗೆ ಹಣ ನೀಡದೇ ತೋಟ ನಾಶ ಮಾಡಿದ್ದಾರೆ ಎಂದು ಸುದೀಪ್ ವಿರುದ್ಧ ದೂರು ದಾಖಲಿಸಿದ್ದರು. ಸುದೀಪ್ ಮಂಗಳವಾರ ಕೋರ್ಟ್‍ಗೆ ಹಾಜರಾಗಬೇಕಿತ್ತು. ಆದರೆ ಅವರು ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
Advertisement
ಏನಿದು ವಿವಾದ?
ಖಾಸಗಿ ವಾಹಿನಿಯಲ್ಲಿ ನಟ ಕಿಚ್ಚ ಸುದೀಪ್ ಅವರ ಕಿಚ್ಚ ಕ್ರಿಯೇಷನ್ ನಿರ್ಮಾಣದ ಅಡಿಯಲ್ಲಿ ವಾರಸ್ದಾರ ಧಾರಾವಾಹಿ ಪ್ರಸಾರವಾಗುತ್ತಿತ್ತು. ಈಗ ಈ ಧಾರಾವಾಹಿ ಪ್ರಸಾರ ನಿಂತಿದ್ದು, ಇದರ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರಿನ ದೀಪಕ್ ಮಯೂರ್ ಪಟೇಲ್ ಅವರ ಮನೆ ಮತ್ತು ಕಾಫಿ ತೋಟವನ್ನು ಬಾಡಿಗೆಗೆ ತಂಡ ಪಡೆದಿತ್ತು.
ಧಾರಾವಾಹಿ ಸಂದರ್ಭದಲ್ಲಿ ಕಾಫಿ ತೋಟಕ್ಕೆ ಸಾಕಷ್ಟು ಹಾನಿಯಾಗಿದೆ. ಹಾನಿಯಾದ ಹಿನ್ನೆಲೆಯಲ್ಲಿ ಒಟ್ಟು 1.50 ಕೋಟಿ ರೂ. ನಷ್ಟವಾಗಿದ್ದು ಈ ಹಣವನ್ನು ನೀಡಬೇಕೆಂದು ನಿರ್ಮಾಣ ತಂಡಕ್ಕೆ ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯನ್ನು ಸುದೀಪ್ ಕ್ರಿಯೇಶನ್ಸ್ ತಿರಸ್ಕರಿಸಿತ್ತು.