ಚಿಕ್ಕಮಗಳೂರು: ಕೆರೆ ನೀರಿಗಾಗಿ ಎರಡು ಗ್ರಾಮಗಳ ನಡುವೆ ಮಾರಾಮಾರಿ ನಡೆದಿದ್ದು, ಪ್ರತಿಭಟನಾನಿರತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.
Advertisement
ಸಖರಾಯಪಟ್ಟಣದ ಅಯ್ಯನಕೆರೆ ನೀರನ್ನು ಜಿಗಣೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಸಮುದ್ರ ಕೆರೆಗೆ ಹರಿಸಬಾರದೆಂದು ಸಖರಾಯಪಟ್ಟಣ ಗ್ರಾಮಸ್ಥರು ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ನ್ನು ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಎರಡೂ ಗ್ರಾಮಗಳ ಗ್ರಾಮಸ್ಥರ ನಡುವೆ ಗಲಾಟೆ ನಡೆದು, ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
Advertisement
ಪ್ರಸ್ತುತ ತಹಶೀಲ್ದಾರ್ ಭಾಗ್ಯ ಅವರು ಈ ಪ್ರದೇಶದಲ್ಲಿ 144 ಸೆಕ್ಷನ್ (ನಿಷೇಧಾಜ್ಞೆ) ಜಾರಿ ಮಾಡಿದ್ದಾರೆ. ಇದೀಗ ಸಖರಾಯಪಟ್ಟಣ ಸುತ್ತಮುತ್ತ ಬಿಗಿ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಗಣೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಸಮುದ್ರ ಕೆರೆಗೆ ನೀರು ಹರಿಸಿದರೆ ಬೋರ್‍ವೆಲ್‍ಗಳು ಅಂತರ್ಜಾಲ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಮತ್ತು ಹೊಲಗದ್ದೆಗಳಿಗೂ ನೀರು ಲಭಿಸಲಿದೆ ಎಂದು ಗುರುವಾರ ಜಿಗಣೇಹಳ್ಳಿಯ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಇದನ್ನು ವಿರೋಧಿಸಿ ಸಖರಾಯಪಟ್ಟಣ ಗ್ರಾಮಸ್ಥರು ಕಡೂರು-ಮಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು.
Advertisement
https://www.youtube.com/watch?v=AmB7U5-ug8o