Connect with us

Chikkamagaluru

ಸಹವಾಸ ದೋಷದಿಂದ ಕೆಟ್ಟಿದ್ದಾರೆ – ಸಿದ್ದರಾಮಯ್ಯಗೆ ಸಿ.ಟಿ ರವಿ ಟಾಂಗ್

Published

on

ಚಿಕ್ಕಮಗಳೂರು: ತಂದೆ-ತಾಯಿಗೆ ದೇವರ ಮೇಲೆ ಶ್ರದ್ಧೆ ಇರೋ ಕಾರಣಕ್ಕೆ ದೇವರ ಹೆಸರಿಟ್ಟರು. ಆದರೆ ಅವರು ಸಹವಾಸ ದೋಷದಿಂದ ಕೆಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿ.ಟಿ ರವಿ ಟಾಂಗ್ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹನುಮ ಹುಟ್ಟಿದ್ದು ಗೊತ್ತಾ ಪ್ರಶ್ನೆಗೆ ಉತ್ತರಿಸಿದ ಅವರು, ತಾಯಿ.. ಇವರೇ ನಿಮ್ಮ ತಂದೆ ಎಂದರೆ ನಂಬುತ್ತಾರೆ ಹೊರತು ಯಾರೂ ಸಾಕ್ಷಿ ಕೇಳಲ್ಲ. ಕೆಲವರು ಸಾಕ್ಷಿ ಕೇಳುವ ಮನಸ್ಥಿತಿಯ ಜನರು ಇರ್ತಾರೆ. ಸಿದ್ದರಾಮಯ್ಯ ಸಾಕ್ಷಿ ಕೇಳುವ ಮನಸ್ಥಿತಿ ಇದ್ದರೆ ಅವರ ದೋಷ ಎಂದು ವಾಗ್ದಾಳಿ ನಡೆಸಿದರು.

ಕೆಲವರಿಗೆ ಎಲ್ಲವನ್ನೂ ಅನುಮಾನಿಸುವ ಪ್ರವೃತ್ತಿ ಇರುತ್ತೆ. ಸಿದ್ದರಾಮಯ್ಯ ಅವರಿಗೂ ಅಂತಹ ಕಾಯಿಲೆ ಇದ್ರೆ ಅದು ಅವರ ದೋಷ. ನಂಬಿಕೆ ಎಲ್ಲವನ್ನೂ ಮೀರಿದ್ದು ನಂಬಿಕೆಗಳ ಜಗತ್ತು ಇರೋದು. ಕೆಲವರಿಗೆ ಭಗವಂತ ಕಾಣಲ್ಲ, ಕೆಲವರಿಗೆ ಎಲ್ಲ ಕಡೆ ಕಾಣ್ತಾನೆ ಎಂದರು.

ನೋಡುವ ದೃಷ್ಟಿ ಇರೋರಿಗೆ ಭಗವಂತನನ್ನು ತೋರಿಸಬಹುದು. ನೋಡುವ ದೃಷ್ಟಿ ಇಲ್ಲದವರಿಗೆ ಎಲ್ಲಿ ನಿಂತರೂ ಭಗವಂತವ ಕಾಣಲ್ಲ. ಅವರ ನಂಬಿಕೆ ಹುಟ್ಟಿನಿಂದ ಬಂದಿರುವುದಲ್ಲ ಸಹವಾಸ ದೋಷದಿಂದ ಬಂದಿರೋದು ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಸಿದ್ದರಾಮಯ್ಯ ಹೇಳಿದ್ದೇನು..?
ಗ್ರಾಮಪಂಚಾಯ್ತಿ ಚುನಾವಣೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಭಾನುವಾರ ತಮ್ಮ ಹುಟ್ಟೂರಿಗೆ ತೆರಳಿದ್ದರು. ಈ ಸಂದರ್ಭ ಚಿಕನ್ ಊಟ ಮಾಡುತ್ತಿದ್ದ ಸಿದ್ದರಾಮಯ್ಯ ಅವರನ್ನು ಅಭಿಮಾನಿಯೊಬ್ಬ, ಅಣ್ಣಾ ಇವತ್ತು ಹನುಮ ಜಯಂತಿ ಇದೆ ಎಂದು ನೆನಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹನುಮ ಹುಟ್ಟಿದ ದಿನಾಂಕ ನನಿಗೆ ಗೊತ್ತಾ.. ಗೊತ್ತಿದ್ರೆ ಆಚರಿಸು, ಇಲ್ಲಾಂದ್ರೆ ಚಿಕನ್ ತಿನ್ನು ಎಂದು ಹೇಳಿದ್ದರು. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ರಾಜಕೀಯ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿಗಳನ್ನು ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

www.publictv.in