ಚಿಕ್ಕಮಗಳೂರು: ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ (Kalasa) ತಾಲೂಕಿನ ಹೊರನಾಡು (Horanadu) ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ನಡೆದಿದೆ.
ಮಂಗಳವಾರ ಸಂಜೆ ಕಾಡಿಗೆ ಬೆಂಕಿ ಹಬ್ಬಿದ್ದು ನೋಡನೋಡ್ತಿದ್ದಂತೆ ಅರಣ್ಯ ಹೊತ್ತಿ ಉರಿದಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರೂ ಗಾಳಿಗೆ ವೇಗಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚುತ್ತಲೇ ಇತ್ತು. ಇದನ್ನೂ ಓದಿ: ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ
Advertisement
ಕಳಸ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಮುಗಿಲೆತ್ತರದ ಬೆಟ್ಟಗುಡ್ಡಗಳಲ್ಲಿ ಬೆಂಕಿ ಬಿದ್ದ ಪರಿಣಾಮ ಗಾಳಿಯ ವೇಗಕ್ಕೆ ಬೆಂಕಿ ಒಂದು ಗುಡ್ಡದಿಂದ ಮತ್ತೊಂದು ಗುಡ್ಡಕ್ಕೆ ಹಬ್ಬಿದ್ದು ಅರಣ್ಯ ಇಲಾಖೆಗೆ ಬೆಂಕಿ ನಂದಿಸುವುದು ಸವಾಲಾಗಿತ್ತು. ಇದನ್ನೂ ಓದಿ: ಮೊನಾಲಿಸಾ ಸಿನಿಮಾ ವಿವಾದ – ಐವರ ವಿರುದ್ಧ ಬಿತ್ತು ಕೇಸ್
Advertisement
Advertisement
ಕೊನೆಗೂ ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಜೊತೆ ಸಸ್ಯಸಂಪತ್ತು ನಾಶವಾಗಿರುವ ಜೊತೆಗೆ ಪ್ರಾಣಿ-ಪಕ್ಷಿಗಳು ಕೂಡ ಸುಟ್ಟುಕರಕಲಾಗಿವೆ. ಇದನ್ನೂ ಓದಿ: 300 ಮಕ್ಕಳ ಮೇಲೆ ವೈದ್ಯನಿಂದ ರೇಪ್ – ನಾನು `ಶಿಶುಕಾಮಿ’ ಎಂದು ತಪ್ಪೊಪ್ಪಿಕೊಂಡ ಆರೋಪಿ