ಚಿಕ್ಕಮಗಳೂರು: ಕಾಫಿನಾಡ (Chikkamagaluru) ಕಾಂಗ್ರೆಸ್‍ನಲ್ಲಿ (Congress) ಭಿನ್ನಮತದ ಹೊಗೆ ಕಾಣಿಸಿಕೊಂಡಿದೆ. ಡಿ.ಕೆ.ಶಿವಕುಮಾರ್ (D.K Shivakumar) ಆಪ್ತ ಬಣದಲ್ಲಿ ಗುರುತಿಸಿಕೊಂಡು, 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಎಂ.ಎಲ್. ಮೂರ್ತಿ (M.L Murthy) ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಹಾಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಎಂ.ಎಲ್.ಮೂರ್ತಿಯವರು ರಾಜೀನಾಮೆ ಸಲ್ಲಿಸಿದ್ದಾರೆ. ಹಿಂದೆ ಜಿಲ್ಲಾ ಅಧ್ಯಕ್ಷ, ಸಿಡಿಎ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಿದ್ದರು. ಈಗ ಪಕ್ಷ ಅಧಿಕಾರಕ್ಕೆ ಬಂದರೂ ಯಾವುದೇ ಹುದ್ದೆ ನೀಡದೇ ಇರುವುದರ ಬಗ್ಗೆ ಅಸಮಾಧಾನಗೊಂಡಿದ್ದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದರೂ ನಾಯಕರಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಇದನ್ನೂ ಓದಿ: ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ತಂಗಡಗಿ
ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಿರಿಯರಾಗಿದ್ದ ಅವರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಅವರ ರಾಜೀನಾಮೆಯಿಂದ ನಾಯಕರಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಐದಕ್ಕೆ ಐದು ವಿಧಾನಸಭಾ ಕ್ಷೇತ್ರದಲ್ಲಿ ಜಯಭೇರಿ ಸಾಧಿಸಿರುವ ಕಾಂಗ್ರೆಸ್‌ಗೆ ಇದು ಆಂತರಿಕ ಸಂಘರ್ಷಕ್ಕೆ ಮುನ್ನುಡಿ ಬರೆದಂತಾಗಿದೆ. ಇದನ್ನೂ ಓದಿ: ನರೇಗಾದಲ್ಲಿ 11 ಲಕ್ಷ ಕೋಟಿ ಅಕ್ರಮ ಆರೋಪ – CBI ಗೆ ವಹಿಸೋಕೆ ಹೇಳಿ; ಜೋಶಿಗೆ ಡಿಕೆಶಿ ತಿರುಗೇಟು

