ಭಾರೀ ಮಳೆ – ಚಿಕ್ಕಮಗಳೂರಿನ 6 ತಾಲೂಕುಗಳ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ

Public TV
1 Min Read
AI ಚಿತ್ರ
AI ಚಿತ್ರ

– ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌ಆರ್‌ ಪುರ, ಕಳಸ ತಾಲೂಕಿನ ಶಾಲೆಗಳಿಗೆ ರಜೆ

ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಗಾಳಿ (Rain) ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಸೋಮವಾರ (ಜೂ.16) 6 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ (Chikkamagaluru) ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು (Chikkamagaluru), ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಮಳೆ – ದತ್ತಪೀಠದಲ್ಲಿ ಕಾರು ಪಲ್ಟಿ, ತಪ್ಪಿದ ಭಾರೀ ಅನಾಹುತ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಮರಗಳು ಧರೆಗುರುಳಿವೆ. ಶೃಂಗೇರಿಯಲ್ಲಿ ಹೆದ್ದಾರಿ ಮೇಲೆ ಮಣ್ಣು ಕುಸಿದಿದೆ. ಇನ್ನೂ ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಶೃಂಗೇರಿಯಲ್ಲಿ ವರುಣಾರ್ಭಟ – ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ

Share This Article