ಚಿಕ್ಕೋಡಿ: ವೇಗವಾಗಿ ಬಂದ ಸರ್ಕಾರಿ ಬಸ್‌ವೊಂದು (Government Bus) ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಸುನೀಲ್ ಬಂಡರಗರ್ (10) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ. ಟ್ಯೂಷನ್ ಮುಗಿಸಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ಸೆರೆಯಾಗಿದೆ. ಇದನ್ನೂ ಓದಿ: Digital Arrest | ಮಹಿಳೆಯರ ನಗ್ನ ವೀಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್!
ಏನಿದು ಘಟನೆ?
ಸುನೀಲ್ ಬಂಡರಗರ್ ಎಂಬ ಬಾಲಕ ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದ. ಈ ವೇಳೆ ರಸ್ತೆ ದಾಟಲು ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ. ಇದೇ ಸಮಯಕ್ಕೆ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಅಧಿಕೃತಗೊಳಿಸಿದ ಚುನಾವಣಾ ಆಯೋಗ
ಅಥಣಿ ಪೊಲೀಸ್ ಠಾಣಾ (Athani Police Station) ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಜೈಲಲ್ಲಿ ಬಾಡಿ ಫಿಟ್ನೆಸ್ ಕಾಪಾಡಿಕೊಳ್ಳಲು ವಿಟಮಿನ್ ಟ್ಯಾಬ್ಲೆಟ್ ಮೊರೆ ಹೋದ ದರ್ಶನ್