ಚಿಕ್ಕೋಡಿ(ಬೆಳಗಾವಿ): ಪ್ರತ್ಯೇಕ ಜಿಲ್ಲೆಗಾಗಿ ಆಗ್ರಹಿಸಿ ಇಂದು ಚಿಕ್ಕೋಡಿ ಬಂದ್‍ಗೆ ಕರೆ ನೀಡಲಾಗಿದೆ. ಬೆಳಗಾವಿ ಅಧಿವೇಶನ ಹಿನ್ನೆಲೆಯಲ್ಲಿ ಸರಕಾರದ ಮೇಲೆ ಒತ್ತಡ ಹಾಕುವ ನಿಟ್ಟಿನಲ್ಲಿ ಚಿಕ್ಕೋಡಿ ಸಂಪೂರ್ಣ ಬಂದ್ ಆಗುವ ಸಾಧ್ಯತೆಯಿದೆ.
ಈಗಾಗಲೇ ಚಿಕ್ಕೋಡಿಯನ್ನ ಶೈಕ್ಷಣಿಕ ಜಿಲ್ಲೆ ಎಂದು ಘೋಷಿಸಲಾಗಿದ್ದರೂ ಆಡಳಿತಾತ್ಮಕ ದೃಷ್ಟಿಯಿಂದ ಚಿಕ್ಕೋಡಿಯನ್ನ ಜಿಲ್ಲೆ ಮಾಡುವಂತೆ ಹೋರಾಟಗಾರರರು ಒತ್ತಾಯಿಸಲಿದ್ದಾರೆ. ರಾಜ್ಯದ ಅತಿ ದೊಡ್ಡ ಜಿಲ್ಲೆಗಳಲ್ಲಿ ಒಂದಾಗಿರುವ ಬೆಳಗಾವಿ ಜಿಲ್ಲೆಯನ್ನ ಆಡಳಿತಾತ್ಮಕ ದೃಷ್ಟಿಯಿಂದ ಒಡೆಯಬೇಕಿರುವ ಅನಿವಾರ್ಯತೆ ಸರ್ಕಾರದ ಮೇಲಿದ್ದರೂ ಗಡಿ ವಿವಾದ ಹಾಗೂ ಕೇಂದ್ರೀಕೃತ ರಾಜಕಾರಣಕ್ಕೆ ಚಿಕ್ಕೋಡಿ ಜಿಲ್ಲೆಯಾಗಿಲ್ಲ.
Advertisement
Advertisement
ಹೀಗಾಗಿ ಹಲವು ವರ್ಷಗಳಿಂದ ಪ್ರತ್ಯೇಕ ಚಿಕ್ಕೋಡಿ ಜಿಲ್ಲೆಗಾಗಿ ಹೋರಾಟಗಾರರು ನಡೆಸುತ್ತಿರುವ ಹೋರಾಟ, ಹೋರಾಟವಾಗಿಯೇ ಉಳಿದಿದೆ. ಒಟ್ಟಿನಲ್ಲಿ ಇಂದಿನ ಚಿಕ್ಕೋಡಿ ಬಂದ್ ಸರ್ಕಾರಕ್ಕೆ ಮತ್ತಷ್ಟು ತಲೆನೋವಾಗಿ ಪರಿಣಮಿಸಲಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv