ಚಿಕ್ಕೋಡಿ: ತಮ್ಮ ಕ್ಷೇತ್ರದಲ್ಲಿ ಬಿಜೆಪಿ ತನ್ನ ಸ್ವಶಕ್ತಿಯಿಂದ ಗೆಲ್ಲುತ್ತೆ, ಆದರೆ ಮೋದಿ ಅಲೆ ಕರ್ನಾಟಕದಲ್ಲಿ ವಕೌಟ್ ಆಗುವುದು ಡೌಟ್ ಎಂದು ಚಿಕ್ಕೋಡಿ ಬಿಜೆಪಿ ಮುಖಂಡ, ಶಶಿಕಲಾ ಜೊಲ್ಲೆ ಅವರ ಪತಿ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ.
ಜಿಲ್ಲೆಯ ಯಕ್ಸಂಬಾ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಅಲೆಯಲ್ಲಿ ನೂರಕ್ಕೆ ನೂರು ಗೆಲ್ಲೋದು ಕಷ್ಟ. ಆದರೆ ಮೋದಿ ಅವರ ಅಲೆ ಕಳೆದ ಬಾರಿಗಿಂತ ಹೆಚ್ಚಾಗಿದೆ. ಮೊದಲು ಪಕ್ಷ ಆ ಬಳಿಕ ನಮ್ಮ ಕಾರ್ಯ ಬರುತ್ತೆ. ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ, ಬೀರೇಶ್ವರ ಬ್ಯಾಂಕಿನ ಕೆಲಸ ಇಟ್ಟುಕೊಂಡು ಮತಯಾಚನೆ ಮಾಡುತ್ತೇವೆ. ತಮ್ಮ ಪತ್ನಿ ಶಶಿಕಲಾ ಪಕ್ಕದ ನಿಪ್ಪಾಣಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ತನಗೆ ಶ್ರೀರಕ್ಷೆ ಎಂದು ಹೇಳಿದ್ದಾರೆ.
Advertisement
Advertisement
ಅಣ್ಣಾ ಸಾಹೇಬ ಜೊಲ್ಲೆ ಚಿಕ್ಕೋಡಿ-ಸದಲಗಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಪಕ್ಷದ ನಾಯಕರು ಈಗಾಗಲೇ ಟಿಕೆಟ್ ಖಚಿತ ಪಡಿಸಿದ್ದು ಹೀಗಾಗೀ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರವವನ್ನು ಕೈಗೊಂಡಿದ್ದೇವೆ. ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ತಮ್ಮ ನಡುವೆ 20 ವರ್ಷದ ಪೈಪೋಟಿ ನಡೆದಿದೆ. ಹಾಗಾಗಿ ಕ್ಷೇತ್ರದಲ್ಲಿ ಹೊಂದಾಣಿಕೆ ಎಂಬುವುದು ಕೇವಲ ಕಟ್ಟು ಕಥೆ ಎಂದು ಸ್ಪಷ್ಟನೆ ನೀಡಿದ್ದಾರೆ.
Advertisement
ಬಿಜೆಪಿ 72 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಅಣ್ಣಾಸಾಹೇಬ ಜೊಲ್ಲೆ ಅವರ ಪತ್ನಿ ಶಶಿಕಲಾ ಜೊಲ್ಲೆ ಅವರಿಗೆ ನಿಪ್ಪಾಣಿ ಕ್ಷೇತ್ರದ ಟಿಕೆಟ್ ಸಿಕ್ಕಿದೆ.