ಚಿಕ್ಕಮಗಳೂರು: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ತಮಿಳುನಾಡು ಮೂಲದ ಜ್ಯೋತಿ (28), ಮಾದಮ್ಮ(65), ಮಾರಿ (27) ಮೃತ ತೋಟದ ಕಾರ್ಮಿಕರು. ಮಾದಮ್ಮ ಹಾಗೂ ಜ್ಯೋತಿ ತಾಯಿ ಮಗಳಾಗಿದ್ದು, ಮಾರಿ ಸಂಬಂಧಿ ಎಂದು ತಿಳಿದು ಬಂದಿದೆ.
Advertisement
Advertisement
ತಮಿಳುನಾಡಿನ ಸೇಲಂ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನ 14 ಕಾರ್ಮಿಕರು ಕಳೆದ ಕೆಲ ತಿಂಗಳ ಹಿಂದೆ ಜಿಲ್ಲೆಯ ಕಾಫಿತೋಟದಲ್ಲಿ ಕಾಫಿ ಕಟಾವು ಕೆಲಸಕ್ಕೆಂದು ವಲಸೆ ಬಂದಿದ್ದರು. ಕಳಸ ಪಟ್ಟಣದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿ ಗಜೇಂದ್ರ ಅವರ ಕಾಫಿ ತೋಟದಲ್ಲಿ ಕೆಲ ತಿಂಗಳುಗಳಿಂದ ಕೆಲಸ ಮಾಡಿಕೊಂಡಿದ್ದ ಈ ಕಾರ್ಮಿಕರು ಲಾಕ್‍ಡೌನ್‍ನಿಂದ ತಮ್ಮ ಊರಿಗೆ ಹೋಗಲು ಸಾಧ್ಯವಾಗಿರಲಿಲ್ಲ. ತೋಟದ ಕೂಲಿ ಲೈನ್ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
Advertisement
ಜಿಲ್ಲೆಯ ಮಲೆನಾಡು ಭಾಗದಲ್ಲಿ ಶನಿವಾರ ಸಂಜೆ ಗುಡುಗು, ಸಿಡಿಲು, ಗಾಳಿ ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಹಿತ್ಲುಮಕ್ಕಿ ಗ್ರಾಮದ ಲೈನ್ ಮನೆಗಳ ಮುಂದೆ ನಿಂತಿದ್ದ ಮೂವರು ಮಹಿಳೆರಿಗೆ ಸಿಡಿಲು ಬಡಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.