ಚಿಕ್ಕೋಡಿ: ಮಾಜಿ ಸಚಿವ ಹಾಗೂ ಆದ್ಯ ಶ್ರೀ ನಿಜಲಿಂಗೇಶ್ವರ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿ. ಮಲ್ದಾರಿಗೌಡ ಪಾಟೀಲ್ ಇವರ ಸ್ಮರಣಾರ್ಥ ಜ.11ರಂದು ಸಂಕೇಶ್ವರ (Sankeshwar) ಪಟ್ಟಣದ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಕುಣಾಲ್ ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿ (Belagavi) ಜಿಲ್ಲೆ ಹುಕ್ಕೇರಿಯ ಸಂಕೇಶ್ವರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ವೇಳೆ ಶಾಸಕರಾಗಿ, ನೀರಾವರಿ ಸಚಿವರಾಗಿ ಈ ಭಾಗದ ಜನರ ಕಲ್ಯಾಣಕ್ಕಾಗಿ ಸಾಕಷ್ಟು ಶ್ರಮಿಸಿ, ಗಡಿ ಭಾಗದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿದ ಮಲ್ದಾರಿಗೌಡ ಪಾಟೀಲ್‌ರ ಸೇವೆ ಸ್ಮರಣೀಯವಾಗಿದ್ದು, ಅವರ ಸೇವಾ ಕೈಂಕರ್ಯಗಳನ್ನು ಮುಂದುವರಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯ ಹಾಗೂ ಗಡಿ ಭಾಗದ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಧಾರವಾಡದ ಕರಾವಳಿ ಟೀಚರ್ಸ್ ಹೆಲ್ಸ್ಲೈನ್‌ನವರ ಸಹಯೋಗದಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ಎಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಜಾಬ್ ಜಂಕ್ಷನ್, ಯುಥ್, ಅಪ್ಟಿಮಂ, ಮ್ಯಾನ್ ಪವರ್ ಸಂಸ್ಥೆಗಳು ಭಾಗವಹಿಸಲಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಎನ್ ಟಿಸಿ, ಡಿಇಡಿ, ಬಿಇಡಿ, ಬಿಪಿಇಡಿ, ಎಂ.ಕಾಂ, ಬಿಎ, ಬಿಎಸ್ಸಿ, ಎಂಎಸ್ಸಿ , ಎಂಕಾಂ, ಎಂಎಸ್ಸಿ, ಬಿಬಿಎ, ಬಿಸಿಎ, ಐಟಿಐ, ಫಾರ್ಮಸಿ, ಬಿಇ, ಎಂಟೆಕ್, ಎಂಎಸ್‌ಡಬ್ಲ್ಯೂ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದರು.
ಹೆಚ್ಚಿನ ಮಾಹಿತಿಗೆ ಮತ್ತು ಹೆಸರು ನೋಂದಾಯಿಸಲು . 9743218480, 483585840, 8762903585, 9980116526 ಸಂಪರ್ಕಿಸಬಹುದು.