ಚೆನ್ನೈ: ತಮಿಳುನಾಡಿನ ದಿಂಡಿಗಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ತಿರುಚ್ಚಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ದಿಂಡಿಗಲ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
Advertisement
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದು, ರೋಗಿಗಳನ್ನು ಸ್ಥಳಾಂತರಿಸಲಾಗುತ್ತಿದೆ.