ಜೈಪುರ: ನೆರೆ ರಾಷ್ಟ್ರ ಪಾಕಿಸ್ತಾನದ ಮೇಲೆ ಭಾರತೀಯ ಯೋಧರು ಏರ್ ಸ್ಟ್ರೈಕ್ ಮಾಡಿದ ದಿನದಂದೇ ಹುಟ್ಟಿದ ಮಗುವಿಗೆ ರಾಜಸ್ಥಾನದ ದಂಪತಿ `ಮಿರಾಜ್ ಸಿಂಗ್ ರಾಥೋರ್’ ಎಂದು ಹೆಸರಿಟ್ಟಿದ್ದಾರೆ.
ರಾಜಸ್ಥಾನದ ನಾಗ್ ಪುರ ಜಿಲ್ಲೆಯ ದಾಬ್ದಾ ಗ್ರಾಮದ ನಿವಾಸಿ ಮಹಾವೀರ್ ಸಿಂಗ್ ಹಾಗೂ ಸೋನಮ್ ಸಿಂಗ್ ದಂಪತಿ ಮಗುವಿಗೆ ಈ ಹೆಸರನ್ನು ಇಟ್ಟಿದ್ದಾರೆ. ಈ ಮೂಲಕ ದಂಪತಿ ಭಾರತೀಯ ಯೋಧರಿಗೆ ಬಿಗ್ ಸೆಲ್ಯೂಟ್ ಹೊಡೆದಿದ್ದಾರೆ. ಇವರ ಕುಟುಂಬದ ಹಲವರು ಸೈನಿಕರಾಗಿ ದೇಶದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Advertisement
ಮಿರಾಜ್ ಹೆಸರಿಡಲು ಕಾರಣವೇನು?
ಭಾರತೀಯ ವಾಯುಸೇನೆ ಗಡಿ ನಿಯಂತ್ರಣ ರೇಖೆ ದಾಟಿ ಪಾಕಿಸ್ತಾನದ ಉಗ್ರರ ಮೂರು ನೆಲೆಗಳಾದ ಮುಜಾಫರ್ ಬಾದ್, ಬಾಲಕೋಟ್ ಹಾಗೂ ಚಾಕೋಟಿ ಮೇಲೆ ಬಾಂಬ್ ದಾಳಿ ಮಾಡಿ ಅಡಗುತಾಣಗಳನ್ನು ನೆಲಸಮ ಮಾಡಿದೆ. ಇದೇ ಸಮಯಕ್ಕೆ ಅಂದ್ರೆ ಮಂಗಳವಾರ ಬೆಳಗ್ಗಿನ ಜಾವ 3.50ರ ಸುಮಾರಿಗೆ ರಾಜಸ್ಥಾನದ ದಂಪತಿಗೆ ಗಂಡು ಮಗು ಜನಿಸಿದೆ.
Advertisement
Advertisement
ಪಾಕ್ ಉಗ್ರರ ಅಡಗುತಾಣಗಳನ್ನು ಮಟ್ಟಹಾಕಲು ಭಾರತ, ಮಿರಾಜ್ 2000 ಎಂಬ ಯುದ್ಧ ವಿಮಾನವನ್ನು ಬಳಸಿಕೊಂಡಿತು. ಈ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಹೀಗಾಗಿ ಇದೇ ಹೆಸರನ್ನು ತಮ್ಮ ಮಗನಿಗೆ ನಾಮಕರಣ ಮಾಡಲು ದಂಪತಿ ನಿರ್ಧರಿಸಿರುವುದಾಗಿ ವರದಿಯಾಗಿದೆ.
Advertisement
ಭಾರತಾದ್ಯಂತ ಸಂಭ್ರಮ:
ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ವಾಯು ಸೇನೆ (ಐಎಎಫ್) ಪಾಕ್ ಉಗ್ರರ ತರಬೇತಿ ಕ್ಯಾಂಪ್ ಗಳ ಮೇಲೆ ದಾಳಿ ಮಾಡಿದ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಭಾತದಾದ್ಯಂತ ಸಂಭ್ರಮ ಮನೆ ಮಾಡಿತ್ತು. ದೇಶದ ಹಲವು ರಾಜ್ಯಗಳಲ್ಲಿ ವಿಭಿನ್ನವಾಗಿ ಆಚರಣೆ ಮಾಡುವ ಮೂಲಕ ಭಾರತೀಯ ಯೋಧರಿಗೆ ಸೆಲ್ಯೂಟ್ ಹೊಡೆಯುತ್ತಿದ್ದರು. ಸಾವಿರಾರು ಭಾರತೀಯರು ತ್ರಿವರ್ಣ ಧ್ವಜ ಹಿಡಿದು ‘ How Is The Josh’ ಎಂದು ಹೇಳುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ.
ಈ ಮಧ್ಯೆ ದೆಹಲಿಯ ಆಟೋ ಚಾಲಕರೊಬ್ಬರು ಪ್ರಯಾಣಿಕರಿಗೆ ಉಚಿತವಾಗಿ ಸೇವೆ ನೀಡುವ ಮೂಲಕ ಸರ್ಜಿಕಲ್ ಸ್ಟ್ರೈಕ್ – 2ವನ್ನು ಸಂಭ್ರಮಿಸಿದ್ದಾರೆ. ಜೊತೆಗೆ ತಮ್ಮ ಆಟೋದಲ್ಲಿ, ಹುತಾತ್ಮ ಯೋಧರಿಗೆ ನಮನ ಸಲ್ಲಿಸಲು ಹಾಗೂ ಭಾರತೀಯ ವಾಯು ಪಡೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ 2 ನಿಂದಾಗಿ ಎಲ್ಲರಿಗೂ ಉಚಿತ ಪ್ರಯಾಣ ಎಂದು ಬ್ಯಾನರ್ ಹಾಕಿದ್ದರು.
ಭಾರತೀಯ ವಾಯು ಪಡೆ ಮಂಗಳವಾರ ಮುಂಜಾನೆ 3.45ರ ಸುಮಾರಿಗೆ ಮೊದಲು ಬಾಲಕೋಟ್ ಮೇಲೆ ದಾಳಿ ಮಾಡಿತ್ತು. ಬಳಿಕ ಮುಂಜಾನೆ 3.48ಕ್ಕೆ ಮುಜಾಫರ್ ಬಾದ್ ಮೇಲೆ ದಾಳಿ ಮಾಡಲಾಗಿತ್ತು. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ದಾಳಿ ಮಾಡಿದೆ. ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಬಾಲಕೋಟ್ ನೆಲೆಯಲ್ಲಿ 300 ಉಗ್ರರು, ತರಬೇತುದಾರರು ಹಾಗೂ ಜೈಶ್ ಸಂಘಟನೆಯ ಕಮಾಂಡೋಗಳು ಬಲಿಯಾಗಿದ್ದಾರೆ. ಜೊತೆಗೆ ಈ ದಾಳಿಯಲ್ಲಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಅಜರ್ ಮಸೂದ್‍ನ ಭಾಮೈದ ಅಜರ್ ಯೂಸುಫ್ ಅಲಿಯಾಸ್ ಉಸ್ತಾದ್ ಘೋರಿ ಹತ್ಯೆಯಾಗಿದ್ದಾನೆ ಎಂದು ವರದಿಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv