ನೆಲಮಂಗಲ: ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟಿ.ದಾಸರಹಳ್ಳಿ (T. Dasarahalli) ನಿವಾಸಿ ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿ ಪುತ್ರ ದೀಕ್ಷಿತ್ (2) ಮೃತಪಟ್ಟ ಮಗು. ಆಟವಾಡುವ ವೇಳೆ ಮೆಟ್ಟಿಲ ಮೇಲಿಂದ ಮಗು ಉರುಳಿ ಬಿದ್ದಿದೆ. ಕೂಡಲೇ ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. 24 ಗಂಟೆಗಳ ಕಾಲ ಕೋಮಾದಲ್ಲಿದ್ದ ಮಗು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ಸಾವು
ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿ ಎರಡು ದಿನದ ಹಿಂದೆ ತೋಟದಗುಡ್ಡದಹಳ್ಳಿ ಸಂಬಂಧಿಕರ ಮನೆಗೆ ಬಂದಿದ್ದರು ಎಂದು ತಿಳಿದುಬಂದಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಶವಾಗಾರಕ್ಕೆ ಮಗುವಿನ ಮೃತದೇಹ ರವಾನಿಸಲಾಗಿದೆ. ಇದನ್ನೂ ಓದಿ: 5 ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ – ಕುತ್ತಿಗೆ, ಕೈಗೆ ಗಾಯ
