ಯಾದಗಿರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಬಾಲ ಕಾರ್ಮಿಕ ಪದ್ಧತಿ ಹೆಚ್ಚಾಗಿದೆ. ಅಲ್ಲದೆ ಮಕ್ಕಳನ್ನು ಶಾಲೆಯನ್ನು ಬಿಡಿಸಿ ಆಟೋಗಳಲ್ಲಿ ಕೂಲಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಇದನ್ನರಿತ ಕಾರ್ಮಿಕ ಇಲಾಖೆ ಅಧಿಕಾರಿಗಳು ವಿವಿಧ ಕಡೆ ದಾಳಿಗೆ ಮುಂದಾಗಿದ್ದಾರೆ.
Advertisement
ಯಾದಗಿರಿ ಸಹಾಯಕ ಕಾರ್ಮಿಕ ಅಧಿಕಾರಿ ಉಮಾದೇವಿ ಮತ್ತು ಲೇಬರ್ ಇನ್ಸ್‌ಪೆಕ್ಟರ್ ಗಂಗಾಧರ ನೇತೃತ್ವದಲ್ಲಿ ಈ ದಾಳಿ ನಡೆಯಿತು. ಸುರಪುರ, ವಡಗೇರಾ, ಹುಣಸಗಿ, ಶಹಾಪೂರ ಮತ್ತು ಯಾದಗಿರಿ ತಾಲೂಕಿನ ವಿಧದ ಹಳ್ಳಿಗಳಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೆ ದಾಳಿಯಲ್ಲಿ ಸೀಗುವ ಮಕ್ಕಳ ರಕ್ಷಣೆ ಮಾಡಿ ಮಾಲೀಕರ ಮೇಲೆ ಕೇಸ್ ದಾಖಲು ಮಾಡಿದ್ದಾರೆ. ಇದನ್ನೂ ಓದಿ: ಪತ್ನಿಯ ಶಿರಚ್ಛೇದ ಮಾಡಿ ಪೊಲೀಸ್ ಠಾಣೆಗೆ ಹೊತ್ತೊಯ್ದ
Advertisement
Advertisement
ಸದ್ಯ ಹತ್ತಿ ಬಿಡಿಸುವ ಸೀಸನ್ ಇದ್ದು, ಇದಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಹೆಚ್ಚಾಗಿದೆ. ಇದರ ವಿರುದ್ಧ ಕಾರ್ಮಿಕರ ಇಲಾಖೆ ಸಾಕಷ್ಟು ಜಾಗೃತಿ ಮೂಡಿಸುತ್ತಿದೆ. ಆದರೆ ಮಕ್ಕಳು ಆಟೋಗಳಲ್ಲಿ ಸಂಚಾರ ಮಾಡುವಾಗ ಕಾರ್ಮಿಕ ಇಲಾಖೆ ಅಧಿಕಾರಿಗಳ ಜೊತೆಗೆ ಆರ್.ಟಿ.ಓ ಅಧಿಕಾರಿಗಳು ಕೂಡ ಇರಬೇಕು. ಆದರೆ ಈ ವಿಚಾರವಾಗಿ ಅಧಿಕಾರಿಗಳು ನಿದ್ದೆಗೆ ಜಾರಿದ್ದಾರೆ. ಆರ್.ಟಿ.ಓ ಅಧಿಕಾರಿಗಳು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಯಾವುದೇ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತನ ಪತ್ನಿ, ಬಾಮೈದುನನಿಗೂ ಸೋಂಕು- ಗುಜರಾತ್‌ನಲ್ಲಿ 3ಕ್ಕೇರಿದ ಸಂಖ್ಯೆ
Advertisement