ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶಿಫಾರಸು ಮಾಡಲು ನೇಮಕ ಮಾಡಲಾಗಿರುವ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠವು, ರಾಜ್ಯದಲ್ಲಿ ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದಂತೆ 2011ರಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನ ಹಂಚಿಕೆ ಪರಿಶೀಲಿಸಿ: ಹೈಕೋರ್ಟ್ ಆದೇಶ
Advertisement
Advertisement
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲೆ ಮೈತ್ರೇಯಿ ಕೃಷ್ಣನ್ ಅವರು `ಕಳೆದ ವಿಚಾರಣೆ ವೇಳೆ ನ್ಯಾಯಾಲಯ ಸಮಿತಿಗೆ ವರದಿ ಸಲ್ಲಿಸಲು ಸೂಚನೆ ನೀಡಿತ್ತು. ಆ ವರದಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದರು. ಅದನ್ನು ಪರಿಗಣಿಸಿದ ಪೀಠವು ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
Advertisement
ಕೇಂದ್ರ ಸರ್ಕಾರದ ಪರ ವಕೀಲ ಉನ್ನಿಕೃಷ್ಣನ್ ಅವರು `ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದು ವೇಳೆ ಉನ್ನತ ಮಟ್ಟದ ಸಮಿತಿ ಆ ಕುರಿತು ಶಿಫಾರಸ್ಸು ಮಾಡಿದರೆ, ಅದಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.
Advertisement
ರಾಜ್ಯ ಸರ್ಕಾರದ ಪರ ವಕೀಲರು, ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ, ಶೌಚಗೃಹ ನಿರ್ಮಾಣ ಸೇರಿ ಇತರ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶಗಳನ್ನು ಪಾಲನೆ ಮಾಡಲಾಗಿದೆ. ಆ ಸಂಬಂಧ ಅನುಪಾಲನಾ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಎಲ್ಲಾ ಸಮುದಾಯಗಳು ಕರ್ನಾಟಕ ಹೈಕೋರ್ಟ್ ಆದೇಶ ಪಾಲಿಸಬೇಕು: ಖರ್ಗೆ
ಅಪೌಷ್ಟಿಕತೆ ನಿವಾರಿಸಲು ಕ್ರಮಕ್ಕೆ ಸೂಚನೆ: ಅಮರಾವತಿ ಜಿಲ್ಲೆಯ ಮೆಲ್ಘಾಟ್ ಪ್ರದೇಶದ ಮಕ್ಕಳಲ್ಲಿ ಅಪೌಷ್ಟಿಕತೆಯ ವಿರುದ್ಧದ ದೂರುಗಳ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರ ಪೀಠವು ವಿಚಾರಣೆ ನಡೆಸುತ್ತಿದೆ. 2007ರಿಂದ ಪಿಐಎಲ್‌ಗಳನ್ನು ಸಲ್ಲಿಸಿದಾಗಿನಿಂದ ಈ ಪ್ರದೇಶದಲ್ಲಿ ಅಪೌಷ್ಟಿಕತೆ ನಿಭಾಯಿಸಲು ಸಹಕಾರಿ ಪ್ರಯತ್ನವಿದೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ರಾಜ್ಯ ಇಲಾಖೆಗಳಿಗೆ ನಿರ್ದೇಶನ ನೀಡಿದೆ.
ಇದೇ ವೇಳೆ ಮಕ್ಕಳು ಅಪೌಷ್ಟಿಕತೆಯಿಂದ ಸಾಯುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ತಜ್ಞ ವೈದ್ಯರನ್ನು ಮೇಲ್ಘಾಟ್ ಪ್ರದೇಶ ಮತ್ತು ಇತರ ಬುಡಕಟ್ಟು ಪ್ರದೇಶಗಳಿಗೆ ಕಳುಹಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ಎರಡು ವಾರಗಳಲ್ಲಿ ವರದಿ ನೀಡುವಂತೆ ಪೀಠವು ರಾಜ್ಯ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಎಚ್ಚರಿಕೆ ನೀಡಿದೆ.
ಅರ್ಜಿದಾರರಾದ ಡಾ.ರಾಜೇಂದ್ರ ಬರ್ಮಾ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಜುಗಲ್‌ಗಿಲ್ಡಾ ಅವರು, ಮೆಲ್ಘಾಟ್ ಪ್ರದೇಶ ಮಾತ್ರವಲ್ಲದೆ ನೆರೆಯ ಇತರ ಬುಡಕಟ್ಟು ಪ್ರದೇಶಗಳ ಮಕ್ಕಳು ಮತ್ತು ತಾಯಂದಿರಿಗೆ ನಿರೀಕ್ಷಿತ ವೈದ್ಯಕೀಯ ನೆರವು ಸಿಗುತ್ತಿಲ್ಲ. ಕೋವಿಡ್ ಸಾಂಕ್ರಾಮಿಕ ಅವಧಿಯ ನಂತರ ಪರಿಸ್ಥಿತಿ ಹದಗೆಟ್ಟಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಜಬ್, ಹಲಾಲ್‍ನಿಂದಾಗಿ ಬೆಲೆ ಏರಿಕೆಯ ಗಮನ ದೂರವಾಗಿದೆ: ಶಶಿ ತರೂರ್
ಅರ್ಜಿದಾರ ಬಾನುಸಾನೆ, ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಮೆಲ್ಘಾಟ್ ಪ್ರದೇಶದಲ್ಲಿ ಇನ್ನೂ 900 ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು. ಈಗಾಗಲೇ ಅಪೌಷ್ಟಿಕತೆಯಿಂದ 70ಕ್ಕೂ ಹೆಚ್ಚು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. 11,000ಕ್ಕೂ ಹೆಚ್ಚು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ. ಆದರೂ ಅಲ್ಲಿನ ಅಭಿವೃದ್ಧಿಗೆ ಯಾವುದೇ ಕ್ರಮಗಳನ್ನು ಕೈಗೊಳ್ಳಲಾಗುತ್ತಿಲ್ಲ. ಇಲ್ಲಿ ಶಿಶುವೈದ್ಯರು ಅಥವಾ ಸ್ತ್ರೀ ರೋಗತಜ್ಞರು ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳ ಸ್ತ್ರೀರೋಗತಜ್ಞರು, ಶಿಶುವೈದ್ಯರು ಮತ್ತು ರೇಡಿಯಾಲಜಿಸ್ಟ್‌ಗಳನ್ನು ರಾಜ್ಯಾದ್ಯಂತ ಬುಡಕಟ್ಟು ಪ್ರದೇಶಗಳಲ್ಲಿ ನಿಯಮಿತ ಭೇಟಿಗಾಗಿ ನಿಯೋಜಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದೆ.