ತಿರುವನಂತಪುರಂ: ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆದಿದ್ದು, ಬಾಲಕಿಯ ಪತಿ ಮತ್ತು ಪೋಷಕರ ವಿರುದ್ಧ ದೂರು ದಾಖಲಾಗಿರುವ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.
Advertisement
25 ವರ್ಷದ ಪುರುಷನೊಂದಿಗೆ ಅಪ್ರಾಪ್ತ ವಯಸ್ಸಿನ ಬಾಲಕಿಯ ವಿವಾಹ ನಡೆದಿದೆ ಎನ್ನಲಾಗಿದ್ದು, ಬಾಲಕಿಯ ಪತಿ, ಪೋಷಕರು ಸೇರಿದಂತೆ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಒಂದು ಕೆಜಿ ಮೋದಕದ ಬೆಲೆ ಬರೋಬ್ಬರಿ 12,000 ರೂಪಾಯಿ
Advertisement
Advertisement
ಅಪ್ರಾಪ್ತ ವಯಸ್ಸಿನ ಬಾಲಕಿ ಹಾಗೂ ಆಕೆಯನ್ನು ವಿವಾಹವಾದ ವ್ಯಕ್ತಿ ಇಬ್ಬರೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಮದುವೆಗೆ ಸಹಕರಿಸಿದ್ದ ಬಾಲಕಿಯ ಪತಿ, ಹಾಗೂ ಆಕೆಯ ಪೋಷಕರು ಸೇರಿದಂತೆ ಮತ್ತಿತರರ ವಿರುದ್ಧ ಕುರುವರಕುಂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಅಲ್ಲದೇ ಅಡುಗೆಯವರು, ವೀಡಿಯೋಗ್ರಾಫರ್, ಅತಿಥಿಗಳು ಸೇರಿದಂತೆ ಮದುವೆಯಲ್ಲಿ ಪಾಲ್ಗೊಂಡಿದ್ದ ಎಲ್ಲರ ಮೇಲೂ ಬಾಲ್ಯ ವಿವಾಹ ಕಾಯ್ದೆ ನಿಷೇಧ ಕಾಯ್ದೆಯಡಿ ಮೊಕದ್ದಮೆ ದಾಖಲಿಸಬಹುದು. ಬಾಲ್ಯ ವಿವಾಹ ಮಾಡಿಸಿರುವುದು ಸಾಬೀತಾದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಗರಿಷ್ಠ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ ಎಂದು ಹೆಚ್ ಎಸ್ ಒ ಮನೋಜ್ ಪರಯಟ್ಟ ಹೇಳಿದ್ದಾರೆ. ಇದನ್ನೂ ಓದಿ: ಮರಣಹೊಂದಿ ಹತ್ತು ದಿನ ಕಳೆದರೂ ಕೊಳೆಯದೇ ಉಳಿದ ಬೌದ್ಧ ಸನ್ಯಾಸಿ ದೇಹ
ವಾರದ ಹಿಂದೆಯೇ ಮದುವೆ ನಡೆದಿದ್ದು, ವಿವಿಧ ಇಲಾಖೆಗಳು ಹಾಗೂ ಪೊಲೀಸರು ಜಂಟಿಯಾಗಿ ಪ್ರಾಥಮಿಕ ತನಿಖೆ ನಡೆಸಿದ ನಂತರ ಕೇಸ್ ದಾಖಲಿಸಲಾಗಿದೆ. ಪ್ರಸ್ತುತ ಬಾಲಕಿ ಆಕೆಯ ಪೋಷಕರೊಂದಿಗೆ ಇರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ ಈವರೆಗೆ ಯಾರನ್ನೂ ಬಂಧಿಸಿಲ್ಲ, ಈ ವಿಚಾರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.