ಮಂಡ್ಯ: ಬಾಲ್ಯ ವಿವಾಹ ನಿಷೇಧ ಎಂದು ತಿಳಿದಿದ್ದರೂ ಸಹ ಪೋಷಕರು 10ನೇ ತರಗತಿ ಓದುತ್ತಿದ್ದ ಬಾಲಕಿಗೆ ವಿವಾಹ ಮಾಡಿಸಿದ್ದಾರೆ. ಇದು ತಿಳಿದರೆ ತಮ್ಮ ವಿರುದ್ಧ ಕೇಸ್ ದಾಖಲಾಗುತ್ತೆ ಎಂದು ಬಾಲಕಿಯ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.
Advertisement
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 27 ರಂದು ಎಸ್‍ಎಸ್‍ಎಲ್‍ಸಿ ಬಾಲಕಿಗೆ ಪೋಷಕರು ಮನೆಯಲ್ಲೇ ಗುಟ್ಟಾಗಿ ಕೆಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿಸಿದ್ದಾರೆ. ಈ ವಿಷಯವನ್ನು ಸಾರ್ವಜನಿಕವಾಗಿ ತಿಳಿಸಿರಲಿಲ್ಲ. ಆದರೆ 28 ರಂದು ಎಸ್‍ಎಸ್‍ಎಲ್‍ಸಿ ಇದ್ದ ಕಾರಣ ಪೋಷಕರು ಬಾಲಕಿಯ ತಾಳಿ, ಕಾಲುಂಗುರ ಬಿಚ್ಚಿಸಿಕೊಂಡು ಪರೀಕ್ಷೆ ಬರೆಯಲು ಕಳುಹಿಸಿದ್ದರು. ಇದನ್ನೂ ಓದಿ: ಇಂದು ಶಿವಕುಮಾರ ಶ್ರೀಗಳ 115 ನೇ ಜನ್ಮ ದಿನೋತ್ಸವ – ಪೂಜಾ ಕೈಂಕರ್ಯಗಳು ಆರಂಭ
Advertisement
Advertisement
ಪರೀಕ್ಷೆ ಬರೆಯಲು ಹೋದಾಗ ಬಾಲಕಿ ತನ್ನ ಸ್ನೇಹಿತೆಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಾಳೆ. ಮಾಹಿತಿ ಬಹಿರಂಗಗೊಂಡ ಬಳಿಕ ಅಧಿಕಾರಿಗಳು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಪ್ರಸ್ತುತ ಬಾಲಕಿ ಮಂಡ್ಯದ ಬಾಲ ಮಂದಿರದಲ್ಲಿ ಇದ್ದಾಳೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರನ್ನು ನೀಡಿದ್ದಾರೆ.
Advertisement
ಬಾಲಕಿಗೆ ಮದುವೆ ನಿಶ್ಚಯವಾಗಿದೆ ಎಂದು ಕಂಪ್ಲೇಂಟ್ ಬಂದ ಹಿನ್ನೆಲೆಯಲ್ಲಿ ಮಾರ್ಚ್ 18 ಮತ್ತು 25 ರಂದು ಅಧಿಕಾರಿಗಳು ಬಾಲಕಿ ಮನೆಗೆ ಭೇಟಿ ನೀಡಿ ವಾರ್ನಿಂಗ್ ನೀಡಿದ್ದರು. ಆದರೂ ಪೋಷಕರು ಅಧಿಕಾರಿಗಳ ಬುದ್ದಿ ಮಾತಿಗೂ ಕೇರ್ ಮಾಡದೇ 27ರಂದು ಬಾಲಕಿಗೆ ಕದ್ದು ವಿವಾಹ ಮಾಡಿದ್ದರು. ಇದನ್ನೂ ಓದಿ: ಪುನೀತ್ ನಿವಾಸಕ್ಕೆ ರಾಹುಲ್ ಭೇಟಿ – ಕನ್ನಡದಲ್ಲಿ ಅಪ್ಪುಗೆ ನಮನ ಸಲ್ಲಿಸಿದ ಕೈ ನಾಯಕ