ಶಿಕ್ಷಣ ಸಚಿವರ ತವರಿನಲ್ಲಿ ಛತ್ರಿ ಹಿಡಿದು ಪಾಠ ಕೇಳುತ್ತಿದ್ದಾರೆ ಮಕ್ಕಳು!

Public TV
1 Min Read
SHIVAMOGGA SCHOOL

ಶಿವಮೊಗ್ಗ: ಸರ್ಕಾರಿ ಶಾಲೆ (Government School Shivamogga) ಅಂದ್ರೆ ಮೂಗು ಮುರಿಯುವವರೇ ಜಾಸ್ತಿ, ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಇಂದಿಗೂ ಕನಿಷ್ಠ ಮೂಲಭೂತ ಸೌಲಭ್ಯ ಸಹ ಇಲ್ಲ. ಆದರೆ ದುಬಾರಿ ಶಿಕ್ಷಣ ವ್ಯವಸ್ಥೆಯಿಂದಾಗಿ ಬಡ ವಿದ್ಯಾರ್ಥಿಗಳು ವಿಧಿ ಇಲ್ಲದೇ ಸರ್ಕಾರಿ ಶಾಲೆಯನ್ನೇ ಆಶ್ರಯಿಸುವಂತಾಗಿದೆ.

SHIVAMOGGA SCHOOL 2

ಹೌದು. ಇದು ಶಿಕ್ಷಣ ಸಚಿವರ (Education Minister Madhu Bangarappa) ತವರು ಜಿಲ್ಲೆ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯ ಅವ್ಯವಸ್ಥೆ. ಮಲೆನಾಡಿನಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದೆ. ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಮಳೆ ಎಡಬಿಡದೇ ಸುರಿಯುತ್ತದೆ. ಆದರೆ ಸರ್ಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಶಿಥಿಲಗೊಂಡಿರುವ ಪರಿಣಾಮ ಶಾಲೆಯ ಮಾಳಿಗೆ ಸೋರುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್ Vs ಹೆಚ್‌ಡಿಕೆ ನಡುವೆ ಪೆನ್‌ಡ್ರೈವ್‌ ಕದನ – ಸೋಮವಾರ ಸ್ಫೋಟವಾಗುತ್ತಾ ರಹಸ್ಯ?

ಸೋರುತ್ತಿರುವ ಕೊಠಡಿಯೊಳಗೆ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವಂತಾಗಿದೆ. ಈ ಸರ್ಕಾರಿ ಪ್ರೌಢಶಾಲೆಯಲ್ಲಿ 8 ರಿಂದ 10 ನೇ ತರಗತಿಯವರೆಗೆ ಸುಮಾರು 125 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವವರು ಎಲ್ಲರೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು. ಯಾವ ಸಂದರ್ಭದಲ್ಲಿ ಮೇಲ್ಛಾವಣಿ ಕುಸಿಯುತ್ತದೆ ಎಂಬ ಆತಂಕದಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರೇ, ಶಿಕ್ಷಕರು ಆತಂಕದಲ್ಲೇ ಬೋಧನೆ ಮಾಡುವಂತಾಗಿದೆ. ಪೋಷಕರು ಹಾಗು ಸ್ಥಳೀಯರು ಶಾಲಾ ಕಟ್ಟಡ ದುರಸ್ತಿಪಡಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ.

ಇನ್ನಾದರೂ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಈ ಬಗ್ಗೆ ಗಮನ ಹರಿಸುತ್ತಾರಾ ಎಂಬ ನಿರೀಕ್ಷೆಯಲ್ಲಿ ಗ್ರಾಮಸ್ಥರು ಇದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article