ಬೆಂಗಳೂರು: ಶಾಲಾ, ಕಾಲೇಜುಗಳಿಗೆ ಹಾಜರಾಗುವ ಮಕ್ಕಳ ಪೋಷಕರು ಎರಡು ಡೋಸ್ ಕಡ್ಡಾಯ ಪಡೆದಿರಬೇಕು. ಇಲ್ಲದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ತೀರ್ಮಾನವನ್ನು ತಿಳಿಸಿದ್ದಾರೆ.
Advertisement
ರಾಜ್ಯದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ವೈರಸ್‍ನಿಂದಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಶೋಕ್, ಕೋವಿಡ್ ಸಂಬಂಧಪಟ್ಟಂತೆ ತಜ್ಞರೊಂದಿಗೆ ಸಭೆ ನಡೆಸಿದ್ದೇವೆ. ಇಡೀ ವಿಶ್ವದಲ್ಲಿ 400 ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಈ ವೈರಸ್ ತೀವ್ರ ಪ್ರಮಾಣದಲ್ಲಿ ಇಲ್ಲ. ಯಾವುದೇ ಸಾವಿನ ಪ್ರಕರಣ ಈ ವರೆಗೆ ಕಂಡುಬಂದಿಲ್ಲ ಎಂದು ವರದಿ ಬಂದಿದೆ. ಆದರೂ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಮತ್ತೆ ಕೇರಳದ ಐವರು ವಿದ್ಯಾರ್ಥಿಗಳಿಗೆ ಕೊರೊನಾ
Advertisement
Advertisement
ಸಿನಿಮಾ, ಮಾಲ್ ಮತ್ತು ಶಾಲೆಗೆ ಹಾಜರಾಗುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ಶಾಲೆಗಳಲ್ಲಿ ಸಭೆ ಸಮಾರಂಭಗಳಿಗೆ ಇಂದಿನಿಂದ ಅವಕಾಶವಿಲ್ಲ. ಶಾಲಾ, ಕಾಲೇಜುಗಳಲ್ಲಿ ಹೆಚ್ಚು ಸೋಂಕು ಕಂಡು ಬರುತ್ತಿರುವುದರಿಂದ ಈ ಕ್ರಮ ಕೈಗೊಂಡಿದ್ದೇವೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ವಾರಂಟೈನ್
Advertisement