– ಮಕ್ಕಳನ್ನು ಹೇಗೆ ಉದ್ಧಾರ ಮಾಡ್ತೀರಾ ಅಂತಾ ಶಿಕ್ಷಕರಿಗೆ ತರಾಟೆ
ಹಾಸನ: ಅರಸೀಕೆರೆಯ (Arasikere) ಶಾಲೆಯೊಂದರಲ್ಲಿ (School) ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಗರಂ ಆಗಿದ್ದಾರೆ.
Advertisement
ಗಣರಾಜ್ಯೋತ್ಸವ (Republic Day) ಅಂಗವಾಗಿ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭ ಶಾಲಾ ಮಕ್ಕಳು ನೃತ್ಯ ಪ್ರದರ್ಶನವೊಂದರಲ್ಲಿ ಭಾರತದ ರಾಷ್ಟ್ರೀಯ ಹೂವು ಕಮಲದ ಚಿತ್ರವನ್ನು ಪ್ರದರ್ಶಿಸಿದ್ದರು. ಇದರಿಂದ ಶಾಸಕ ಶಿವಲಿಂಗೇಗೌಡ, ತಹಸೀಲ್ದಾರ್ ಸಂತೋಷ್ ಹಾಗೂ ಸಾರ್ವಜನಿಕರು ಕೆಂಡಾಮಂಡಲವಾಗಿದ್ದು, ಶಾಲಾ ಶಿಕ್ಷಕಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ಮೊದಲ ಪಟ್ಟಿ ರಿಲೀಸ್
Advertisement
Advertisement
ಶಾಲಾ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕ, ಕಮಲ ಯಾವ ಪಕ್ಷದ ಚಿಹ್ನೆ? ಯಾವ ಸೀಮೆ ನಾಗರಿಕರು ನೀವು? ಮಕ್ಕಳನ್ನು ಹೇಗೆ ಉದ್ಧಾರ ಮಾಡ್ತೀರಾ ಎಂದು ಕೋಪಗೊಂಡಿದ್ದಾರೆ. ಈ ವೇಳೆ ಶಾಲಾ ಶಿಕ್ಷಕಿ, ಕಮಲ ಒಂದು ಪಕ್ಷದ ಚಿಹ್ನೆ ಹೇಗೆ ಆಗುತ್ತೆ ಸರ್? ನೀವು ಹೀಗೆ ಮಾತನಾಡಿದರೆ ಸರಿ ಹೋಗಲ್ಲ ಸರ್ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 2024ರಲ್ಲಿ ಅಣು ಬಾಂಬ್ ಸ್ಫೋಟಗೊಳ್ಳುವ ಸಾಧ್ಯತೆ ಇದೆ: ಕೋಡಿಮಠ ಸ್ವಾಮೀಜಿ ಭವಿಷ್ಯ
Advertisement
ಇದರಿಂದ ಸಿಟ್ಟುಗೊಂಡ ಶಾಸಕರು, ಏನು ಸರಿ ಹೋಗಲ್ಲ? ನಿಮಗೆ ನೋಟಿಸ್ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ತಹಸೀಲ್ದಾರ್ ಸಂತೋಷ್ ಮಧ್ಯಪ್ರವೇಶಿಸಿ ಒಂದು ಧರ್ಮ, ಒಂದು ಪಕ್ಷದ ಚಿಹ್ನೆ ಹೈಲೆಟ್ ಮಾಡಬಾರದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಕಿ ಲಕ್ಷ್ಮಿ, ನಿನ್ನೆ-ಮೊನ್ನೆ ನೃತ್ಯ ನೋಡಿದವರು ನೋಡಿದರೆ ಅದನ್ನು ಬಳಸುತ್ತಿರಲಿಲ್ಲ. ಸಭೆಯಲ್ಲಿ ಸೂಚನೆ ನೀಡಿದ್ದರೆ ಚಿಹ್ನೆ ಬಳಸುತ್ತಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್
ಇದಕ್ಕೆ ಪ್ರತ್ಯುತ್ತರ ಕೊಟ್ಟ ಶಾಸಕ ಶಿವಲಿಂಗೇಗೌಡ, ಇವರು ಎಂತದ್ದಾನ್ನಾದರೂ ತೋರಿಸಿಕೊಳ್ಳಲಿ ನನಗೇನು? ಅಲ್ಲಿ ಯಾವನೋ ಕುಳಿತಿರುತ್ತಾನೆ. ಬಿಜೆಪಿ ಚಿಹ್ನೆ ತೋರಿಸುತ್ತಿದ್ದಾರೆ ಎಂದು ಕಲ್ಲು ತೂರಿದರೆ ಮುಂದೆ ಆಗುವುದನ್ನು ನೋಡಬೇಕು. ಇದು ರಾಷ್ಟ್ರೀಯ ಹಬ್ಬ ಎಂದು ಸಿಡಿಮಿಡಿಗೊಂಡಿದ್ದಾರೆ. ಅತ್ಯುತ್ತಮ ನೃತ್ಯಕ್ಕಾಗಿ ಶಾಲಾ ಮಕ್ಕಳು ಮೊದಲ ಬಹುಮಾನ ಪಡೆದಿದ್ದರು. ಶಾಸಕರ ಆಕ್ಷೇಪದ ನಂತರ ತಾಲೂಕು ಆಡಳಿತ ನಾಲ್ಕನೇ ಬಹುಮಾನ ನೀಡಿದೆ. ಇದನ್ನೂ ಓದಿ: ಗಣೇಶ್ ಭಟ್ ಕೆತ್ತಿರೋ ವಿಗ್ರಹವನ್ನು ರಾಮದೇವರ ಬೆಟ್ಟಕ್ಕೆ ನೀಡುವಂತೆ ಇಕ್ಬಾಲ್ ಹುಸೇನ್ ಪತ್ರ