ಕಲಬುರಗಿ: ರಸ್ತೆಯ ಬದಿಯಲ್ಲಿ ಆಟವಾಡುತ್ತಿದ್ದ 10 ಕ್ಕೂ ಹೆಚ್ಚು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಹಾಗರಗಾ ಕ್ರಾಸ್‍ನ ಅಮನ್ ನಗರದಲ್ಲಿ ನಡೆದಿದೆ.
ಮೈಬೂಬ್(6), ಅಫ್ಪಯಾ(7), ಮಹ್ಮದ್ ಸೋಯಬ್(11), ಫರಾನ್(3), ಮಹ್ಮದಿ(5) ಸೇರಿ ಹತ್ತಕ್ಕೂ ಅಧಿಕ ಮಕ್ಕಳಿಗೆ ಬೀದಿ ನಾಯಿಗಳ ದಾಳಿಯಿಂದ ಗಾಯಗಳಾಗಿದ್ದು, ಅವರನ್ನು ಕಲಬುರಗಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Advertisement
ಹಲವು ಬಾರಿ ಮನವಿ ಕೊಟ್ಟರೂ ಬೀದಿನಾಯಿ ಹಾವಳಿ ತಪ್ಪಿಸುವಲ್ಲಿ ಮಹಾನಗರ ಪಾಲಿಕೆ ವಿಫಲವಾಗಿದೆ ಎಂದು ಪೋಷಕರು ಆರೋಪಿದ್ದಾರೆ. ಅಷ್ಟೇ ಅಲ್ಲದೇ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ರೋಜಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement
ಇದೇ ರೀತಿ ಸಿಲಿಕಾನ್ ಸಿಟಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು ಈ ಹಿಂದೆ ಶೌಚಾಲಯಕ್ಕೆ ಹೋಗಿದ್ದ ಬಾಲಕನ ಮೇಲೆ 10 ಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿ ಗಾಯಗೊಳಿಸಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv