Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶಿಷ್ಟ ಕಥಾ ಹಂದರದ ಮಕ್ಕಳ ಚಿತ್ರ ‘ಸೀಸ್ ಕಡ್ಡಿ’ ಬಿಡುಗಡೆಗೆ ರೆಡಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಶಿಷ್ಟ ಕಥಾ ಹಂದರದ ಮಕ್ಕಳ ಚಿತ್ರ ‘ಸೀಸ್ ಕಡ್ಡಿ’ ಬಿಡುಗಡೆಗೆ ರೆಡಿ!

Cinema

ವಿಶಿಷ್ಟ ಕಥಾ ಹಂದರದ ಮಕ್ಕಳ ಚಿತ್ರ ‘ಸೀಸ್ ಕಡ್ಡಿ’ ಬಿಡುಗಡೆಗೆ ರೆಡಿ!

Public TV
Last updated: March 26, 2025 2:39 pm
Public TV
Share
3 Min Read
sees kaddi
SHARE

ಇತ್ತೀಚಿನ ದಿನಗಳಲ್ಲಿ ಮಕ್ಕಳ ಚಿತ್ರಗಳ ಸಂಖ್ಯೆ ಕಡಿಮೆಯಾಗಿದೆ ಅಂತೊಂದು ಕೊರಗು ಕನ್ನಡದ ಸಿನಿಮಾ ಪ್ರೇಮಿಗಳಲ್ಲಿದೆ. ಒಂದು ಸಿನಿಮಾ ರಂಗದ ಜೀವಂತಿಕೆಯ ದೃಷ್ಟಿಯಿಂದ ಎಲ್ಲ ಬಗೆಯ ಸಿನಿಮಾಗಳು ಕೂಡ ಕಾಲ ಕಾಲಕ್ಕೆ ರೂಪುಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಿನಿಮಾಸಕ್ತರ ನಡುವಲ್ಲೊಂದು ಚರ್ಚೆ ಚಾಲ್ತಿಯಲ್ಲಿರುವಾಗಲೇ ಸದ್ದಿಲ್ಲದೆ ತಯಾರಾಗಿ ನಿಂತಿರುವ ವಿಶಿಷ್ಟ ಕಥಾನಕದ ಮಕ್ಕಳ ಚಿತ್ರವೊಂದು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಸದ್ದು ಮಾಡಿದೆ. ಇನ್ನೇನು ಆರಂಭವಾಗಲಿರೋ ಶಾಲಾ ರಜಾ ದಿನಗಳು ಅಂತಿಮ ಘಟ್ಟ ತಲುಪಿಕೊಳ್ಳುವ ಹೊತ್ತಿಗೆಲ್ಲ ಅದ್ಧೂರಿಯಾಗಿ ತೆರೆಗಾಣಲು ತಯಾರಿಯೂ ಆರಂಭವಾಗಿದೆ. ಹಾಗೆ ಬಿಡುಗಡೆಗೆ ತಯಾರಾಗಿರುವ ಮಕ್ಕಳ ಚಿತ್ರ ‘ಸೀಸ್ ಕಡ್ಡಿ’. ಇದನ್ನೂ ಓದಿ:ದುಬೈ ಮರಳುಗಾಡಿನಲ್ಲಿ ನಟಿ ಫೋಟೋಶೂಟ್- ಬಾಲಿವುಡ್ ಬ್ಯೂಟಿಯಂತೆ ಮಿಂಚಿದ ಇಶಿತಾ

sees kaddi 2

ಇದು ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ನಿರ್ದೇಶಕರಾಗಿ ಪರಿಚಿತರಾಗಿರುವ ರತನ್ ಗಂಗಾಧರ್ ನಿರ್ದೇಶನದ ಚಿತ್ರ. ‘ಸೀಸ್ ಕಡ್ಡಿ’ (Seas Kaddi) ಎಂಬುದು ನಮ್ಮೆಲ್ಲರ ಪಾಲಿಗೆ ಅಕ್ಷರದ ಬೆಳಕು ತೋರುವ ವಸ್ತು. ಅಂತಹ ಪೆನ್ಸಿಲ್ ಅನ್ನು ರೂಪಕವಾಗಿಟ್ಟುಕೊಂಡು, ಅದರ ಭಾಗವಾಗಿರೋ ಲೆಡ್, ಶಾರ್ಪ್ನರ್, ಇರೇಜರ್ ಮುಂತಾದವುಗಳನ್ನು ಹೋಲುವ ಪಾತ್ರಗಳ ಮೂಲಕ ಈ ಸಿನಿಮಾ ಕಥೆ ತುಂಬಿಕೊಂಡಿದೆಯಂತೆ. ಈ ರೂಪಕಗಳನ್ನಿಟ್ಟುಕೊಂಡು ಎಂತಹ ಪಾತ್ರಗಳು ಸೃಷ್ಟಿಯಾಗಿರಬಹುದೆಂಬ ಕುತೂಹಲಕ್ಕೆ ತಿಂಗಳೊಪ್ಪತ್ತಿನಲ್ಲಿಯೇ ಮಜವಾದ ಉತ್ತರ ಸಿಗಲಿದೆ. ಒಂದು ಪೆನ್ಸಿಲ್‌ನ ರೂಪಕದೊಂದಿಗೆ ಬದುಕಿನ ಅಚ್ಚರಿದಾಯಕ ಮಜಲುಗಳನ್ನು ತೆರೆದಿಡುವ ಈ ಸಿನಿಮಾ ಮಕ್ಕಳ ಚಿತ್ರಗಳ ಸಾಲಿನಲ್ಲಿ ಭಿನ್ನವಾಗಿ ನೆಲೆಕಂಡುಕೊಳ್ಳುವ ಸಾಧ್ಯತೆಗಳಿವೆ. ಇದುವರೆಗೂ ಸಿನಿಮೋತ್ಸವಗಳಲ್ಲಿ ಪ್ರದರ್ಶನಗೊಂಡಿದ್ದ ಈ ಚಿತ್ರವನ್ನು ನೋಡಿದವರೆಲ್ಲ ನಾನಾ ದಿಕ್ಕಿನಲ್ಲಿ ವಿಮರ್ಶೆ ಮಾಡಿದ್ದಾರೆ. ಅವೆಲ್ಲವೂ ಸಕಾರಾತ್ಮಕವಾಗಿವೆ ಅನ್ನೋದೇ ‘ಸೀಸ್ ಕಡ್ಡಿ’ಯ ನಿಜವಾದ ಹೆಗ್ಗಳಿಕೆ. ಒಂದಿಡೀ ಸಿನಿಮಾ ಲೈವ್ ಸೌಂಡ್ ರೆಕಾರ್ಡಿಂಗ್ ಮೂಲಕ ಮೂಡಿ ಬಂದಿರೋದು ಮತ್ತೊಂದು ವಿಶೇಷ.

sees kaddi 3

ಇಲ್ಲಿ ಹರಿಕಥೆಯಲ್ಲಿ ಪ್ರಾವಿಣ್ಯ ಹೊಂದಿರೋ ಸೆಕ್ಯೂರಿಟಿ ಗಾರ್ಡ್ ಮತ್ತು ಕಾಂದಂಬರಿಕಾರನೋರ್ವನ ಮುಖಾಮುಖಿಯಾಗುತ್ತೆ. ಹಾಗೆ ಸಿಕ್ಕ ಸೆಕ್ಯೂರಿಟಿ ಗಾರ್ಡ್ ಅನ್ನೇ ಬೇತಾಳನಾಗಿ ಕಲ್ಪಿಸಿಕೊಂಡು ಆ ಕಾದಂಬರಿಕಾರ ಕಥೆಯೊಂದನ್ನು ಬರೆಯಲಾರಂಭಿಸುತ್ತಾನೆ. ಆ ಬೇತಾಳನ ಪ್ರಶ್ನೆಗಳಿಗೆ ವಿಕ್ರಮಾದಿತ್ಯನ ಪಾತ್ರ ಕೊಡುವ ಉತ್ತರಗಳ ಮೂಲಕ ಕಥೆ ಗರಿಬಿಚ್ಚಿಕೊಳ್ಳುತ್ತೆ. ಮಕ್ಕಳ ಕಥನದಲ್ಲಿಯೇ ಹಿರೀಕರ ಕಥೆಯೂ ತೆರೆದುಕೊಳ್ಳುತ್ತಾ ಸಾಗುತ್ತದೆ. ಅದರೊಂದಿಗೇ ಒಟ್ಟಾರೆ ಸಿನಿಮಾದ ಪಾತ್ರಗಳೂ ಕದಲಲಾರಂಭಿಸುತ್ತವೆ. ಈ ಸಿನಿಮಾ ಈಗಾಗಲೇ ನೋಯ್ಡಾದಲ್ಲಿ ನಡೆದಿರುವ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರದರ್ಶನ ಕಂಡಿದೆ. ಉತ್ತಮ ನಿರ್ದೇಶನ ವಿಭಾಗದಲ್ಲಿ ಪ್ರಶಸ್ತಿಯನ್ನೂ ಬಾಚಿಕೊಂಡಿದೆ. ಮೆಲ್ಬೋರ್ನ್ ಸಿನಿಮಾ ಫೆಸ್ಟಿವಲ್ (Film Festival) ನಲ್ಲಿಯೂ ಪ್ರದರ್ಶನ ಕಂಡು ಎಲ್ಲರಿಂದಲೂ ಮೆಚ್ಚುಗೆ ಪಡೆದುಕೊಂಡಿದೆ.

sees kaddi 1

ಸಾಮಾನ್ಯವಾಗಿ ಮಕ್ಕಳ ಸಿನಿಮಾ ಅಂದಾಕ್ಷಣ ಸಿದ್ಧಸೂತ್ರದ ಸುತ್ತ ಒಂದಷ್ಟು ಕಲ್ಪನೆಗಳು ಮೂಡಿಕೊಳ್ಳುತ್ತವೆ. ಅಂಥಾ ಕಲ್ಪನೆಗಳ ನಿಲುಕಿನಾಚೆಗೆ ಹಬ್ಬಿಕೊಂಡ ಲಕ್ಷಣಗಳಿದ್ದಾವೆ. ಚಿತ್ರತಂಡ ಹಂಚಿಕೊಂಡಿರೋ ಕೆಲ ವಿಚಾರಗಳನ್ನು ಗಮನಿಸಿದರೆ ಆ ವಿಚಾರ ಸ್ಪಷ್ಟವಾಗುತ್ತದೆ. ಇಲ್ಲಿ ಐದು ಕಥೆಗಳಿವೆ. ಅವೆಲ್ಲವೂ ಒಂದು ಬಿಂದುವಿನಲ್ಲಿ ಸಂಧಿಸುತ್ತವೆ. ಒಬ್ಬ ಕಾದಂಬರಿಕಾರ ಮತ್ತು ಆತನ ಸುತ್ತ ಹಬ್ಬಿಕೊಂಡ ಮಕ್ಕಳ ಪಾತ್ರಗಳಾಗಿವೆ. ಅವುಗಳ ಸುತ್ತ ಥ್ರಿಲ್ಲಿಂಗ್ ಅಂಶಗಳಗೊಂಡು, ಚಿಂತನೆಗೂ ಹಚ್ಚುವಂಥಾ ಧಾಟಿಯಲ್ಲಿ ಈ ಸಿನಿಮಾವನ್ನು ರೂಪಿಸಲಾಗಿದೆಯಂತೆ. ಒಟ್ಟಾರೆಯಾಗಿ ಮಕ್ಕಳ ಚಿತ್ರವಾದರೂ ಕೂಡ ಎಲ್ಲ ವಯೋಮಾನದವರನ್ನೂ ಆವರಿಸಿಕೊಳ್ಳುವ ಕಥನ ಸೀಸ್ ಕಡ್ಡಿಯದ್ದು.

ಪ್ರಯೋಗಾತ್ಮಕ ಗುಣದೊಂದಿಗೆ ಈ ಸಿನಿಮಾವನ್ನು ನಿರ್ದೇಶನ ಮಾಡಿರುವವರು ರತನ್ ಗಂಗಾಧರ್. ಸಂಪತ್ ಶಿವಶಂಕರ್, ಕೃತಿ ನಾಣಯ್ಯರೊಂದಿಗೆ ರತನ್ ಅವರೂ ಸೇರಿಕೊಂಡು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇಲ್ಲಿನ ಒಂದೊಂದು ಭಾಗದ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಒಬ್ಬೊಬ್ಬರು ನಿರ್ವಹಿಸಿದ್ದಾರೆ. ವಿಕ್ರಮ ಬೇತಾಳ ಭಾಗಕ್ಕೆ ಆಕರ್ಷ ಕಮಲ, ಚಿಕ್ಕಿ ಪಾತ್ರಕ್ಕೆ ಅಕ್ಷರ ಭಾರದ್ವಾಜ್, ರವೀಶ ಪಾತ್ರಕ್ಕೆ ಶರತ್ ಕೆ ಪರ್ವತವಾಣಿ, ಮಂಜಿ ಪಾತ್ರಕ್ಕೆ ಜಯಂತ್ ವೆಂಕಟ್ ಹಾಗೂ ತೌಫಿಕ್ ಪಾತ್ರಕ್ಕೆ ಮಹೇಂದ್ರ ಗೌಡ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಕೆ.ಸಿ ಬಾಲಸಾರಂಗನ್ ಸಂಗೀತ ನಿರ್ದೇಶನದಲ್ಲಿ ಈ ಸಿನಿಮಾ ಹಾಡುಗಳು ರೂಪುಗೊಂಡಿವೆ. ಮಹೇಶ್ ಎನ್.ಸಿ, ಪ್ರತಾಪ್ ವಿ ಭಟ್, ಮಹೇಂದ್ರ ಗೌಡ ಅನುಜಯ ಎಸ್. ಕುಮ್ಟಕರ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಇದೇ ಮೇ ತಿಂಗಳ ಕಡೆಯ ಭಾಗದಲ್ಲಿ ‘ಸೀಸ್ ಕಡ್ಡಿ’ ಚಿತ್ರ ತೆರೆಗಾಣಲಿದೆ. ಈ ಮೂಲಕ ಬೇಸಿಗೆ ರಜೆಯ ಅಂಚಿನಲ್ಲಿ ಒಂದು ಅಪರೂಪದ ಅನುಭೂತಿ ಕನ್ನಡ ಚಿತ್ರ ಪ್ರೇಮಿಗಳಿಗೆ ಕಾದಿದೆ.

TAGGED:sandalwoodsees kaddi filmಸೀಸ್‌ ಕಡ್ಡಿ ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
4 minutes ago
Nikhil Kumaraswamy
Bengaluru City

ನಾಳೆ ʻಜೆಡಿಎಸ್ ಬೆಳ್ಳಿ ಹಬ್ಬʼ ಸಮಾವೇಶ – 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ

Public TV
By Public TV
19 minutes ago
West Bengala Election bjp manifesto Rs 3000 aid for women unemployed youth Uniform Civil Code in 6 months crackdown on infiltration Amit Shah Sankalp Patra 7th Pay Commission
Latest

ಮಹಿಳೆಯರಿಗೆ, ನಿರೋದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ – ಬಂಗಾಳ ಗೆಲ್ಲಲು ಬಿಜೆಪಿಯಿಂದ 15 ಭರವಸೆ

Public TV
By Public TV
1 hour ago
Srinanda
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
1 hour ago
Red Corner Notice Mangaluru
Crime

ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

Public TV
By Public TV
1 hour ago
Siddaramaiah HD Kumaraswamy
Latest

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?