ಬೆಳಗಾವಿ: ಬಾಲ ಕಾರ್ಮಿಕರನ್ನು ಮದ್ಯದಂಗಡಿಗಳಲ್ಲಿ ಬಳಕೆ ಮಾಡುತ್ತಿರುವ ಘಟನೆ ಬೆಳಗಾವಿಯ ರಾಯಭಾಗ ತಾಲೂಕಿನ ಹಾರೋಗೇರಿ ಹಾಗೂ ಮುಗಳಕೋಡ್ ಪಟ್ಟಣಗಳಲ್ಲಿ ಕಂಡು ಬಂದಿದೆ.
ಬಾಲ ಕಾರ್ಮಿಕರ ಬಳಕೆ ಅಕ್ಷಮ್ಯ ಅಪರಾಧ. ಬಾಲ ಕಾರ್ಮಿಕರ ಬಳಕೆ ಮಾಡಿದರೆ ಜೈಲು ಶಿಕ್ಷೆ ಕೂಡ ಇದೆ. ಆದರೆ ಇಲ್ಲಿ ಬಾಲ ಕಾರ್ಮಿಕರನ್ನು ಮದ್ಯದಂಗಡಿಗಳಲ್ಲಿ ಬಳಕೆ ಮಾಡುತ್ತಿದ್ದರೂ ಅಬಕಾರಿ, ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ.
Advertisement
Advertisement
ಚಿಕ್ಕ ಮಕ್ಕಳ ಕೈಯಲಿ ದುಡಿಸಿಕೊಳ್ಳೋದು ಕಾನೂನಿನ ಪ್ರಕಾರ ಅಪರಾಧ. ಇದು ಗೊತ್ತಿದರೂ ಬಾಲಕರನ್ನು ತಮ್ಮ ಕೆಲಸ ಕಾರ್ಯದಲ್ಲಿ ಬಳಸಿಕೊಳುತ್ತಿದ್ದಾರೆ. ಬೆಳಗಾವಿಯ ರಾಯಭಾಗ ತಾಲೂಕಿನ ಹಾರೋಗೇರಿ ಹಾಗೂ ಮುಗಳಕೋಡ್ ಪಟ್ಟಣದ ಮದ್ಯದಂಗಡಿಗಳಿಗೆ ಬರೋ ಕುಡುಕರಿಗೆ ಈ ಬಾಲಕರು ಸರ್ವ್ ಮಾಡ್ತಾರೆ. ಅಷ್ಟೇ ಅಲ್ಲ ಕುಡುಕರು ಬಳಸಿದ ಗ್ಲಾಸ್‍ಗಳನ್ನು ಬಾಲಕರೇ ತೊಳೆಯುತ್ತಾರೆ.
Advertisement
ಪಬ್ಲಿಕ್ ಟಿವಿ ರಹಸ್ಯ ಕಾರ್ಯಾಚರಣೆಯಲ್ಲಿ ಬಾಲ ಕಾರ್ಮಿಕ ಪದ್ದತಿ ಬೆಳಕಿಗೆ ಬಂದಿದ್ದು, ಇನ್ನೂ ರಾಯಭಾಗ, ಚಿಕ್ಕೋಡಿಯ ಡಾಬಾಗಳಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟವಾಗುತ್ತಿದೆ ಎಂಬ ಆರೋಪಗಳು ಸಹ ಕೇಳಿ ಬರುತ್ತಿವೆ. ಮಕ್ಕಳಿಗೆ ಕಡಿಮೆ ಹಣ ನೀಡಿ ದುಡಿಸಿಕೊಳ್ಳಲಾಗುತ್ತಿದೆ.