ಪರೋಟ ಸಾಮಾನ್ಯವಾಗಿ ಎಲ್ಲರೂ ತಿನ್ನುತ್ತಾರೆ. ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ ಅಥವಾ ರಾತ್ರಿಯ ಊಟಕ್ಕೂ ಇದನ್ನು ಸೇವಿಸಬಹುದಾಗಿದೆ. ಬೆಣ್ಣೆಯೊಂದಿಗೆ ಬಿಸಿಬಿಸಿಯಾಗಿ ಇದನ್ನು ತಿಂದರೆ ಇನ್ನೂ ಹೆಚ್ಚಿನ ರುಚಿಯನ್ನು ನೀಡುತ್ತದೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಚಿಲ್ಲಿ ಗಾರ್ಲಿಕ್ ಪರೋಟ ಯಾವ ರೀತಿಯಾಗಿ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ. ಹಾಗಿದ್ರೆ ಇದನ್ನು ಅತ್ಯಂತ ಸುಲಭವಾಗಿ ಮನೆಯಲ್ಲಿಯೇ ಹೇಗೆ ತಯಾರಿಸಬಹುದು ಎಂಬುದನ್ನು ತಿಳಿದುಕೊಳ್ಳಿ. ಇದನ್ನೂ ಓದಿ: ಮೈದಾ ಬೇಡ – 5 ಪದಾರ್ಥಗಳನ್ನು ಬಳಸಿ ಮಾಡಿ ಪ್ರೊಟೀನ್‌ಯುಕ್ತ ಪ್ಯಾನ್‌ಕೇಕ್
ಬೇಕಾಗುವ ಸಾಮಗ್ರಿಗಳು:
ಗೋಧಿ ಹಿಟ್ಟು – ಅರ್ಧ ಕಪ್
ಬೆಣ್ಣೆ- 1 ಚಮಚ
ತುರಿದ ಬೆಳ್ಳುಳ್ಳಿ – 1 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಚಿಲ್ಲಿ ಫ್ಲೇಕ್ಸ್ – 1 ಚಮಚ
ಹೆಚ್ಚಿದ ಕೊತ್ತಂಬರಿ ಸೊಪ್ಪು – ಸ್ವಲ್ಪ
ನೀರು – 1 ಕಪ್
ಹೆಚ್ಚಿದ ಹಸಿರುಮೆಣಸು – ಅರ್ಧ ಚಮಚ
ಮಾಡುವ ವಿಧಾನ:
* ಮೊದಲಿಗೆ ಒಂದು ಬೌಲ್‌ನಲ್ಲಿ ಬೆಣ್ಣೆ, ತುರಿದ ಬೆಳ್ಳುಳ್ಳಿ, ಚಿಲ್ಲಿ ಫ್ಲೇಕ್ಸ್, ಹೆಚ್ಚಿದ ಹಸಿರುಮೆಣಸು ಹಾಗೂ ಕೊತ್ತಂಬರಿ ಸೊಪ್ಪನ್ನು ಹಾಕಿ ಚನ್ನಾಗಿ ಮಿಕ್ಸ್ ಮಾಡಿಕೊಳ್ಳಿ.
* ಬಳಿಕ ಇನ್ನೊಂದು ಬೌಲ್‌ನಲ್ಲಿ ಗೋಧಿ ಹಿಟ್ಟು ಮತ್ತು ಉಪ್ಪನ್ನು ಹಾಕಿಕೊಂಡು ಅದಕ್ಕೆ ಸ್ವಲ್ಪ ಸ್ವಲ್ಪವೇ ನೀರನ್ನು ಸೇರಿಸಿಕೊಂಡು ಚಪಾತಿ ಹಿಟ್ಟಿನ ರೀತಿಯಲ್ಲಿ ಕಲಸಿಕೊಳ್ಳಿ.
* ಈಗ ಬೆಣ್ಣೆ ಹಾಕಿದ್ದ ಮಿಶ್ರಣವನ್ನು ಈ ಹಿಟ್ಟಿನೊಂದಿಗೆ ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.
* ಈಗ ಇದನ್ನು ಚಪಾತಿ ಹಿಟ್ಟಿನ ಉಂಡೆಗಳನ್ನಾಗಿ ಮಾಡಿಕೊಂಡು ಸ್ವಲ್ಪ ದಪ್ಪಕ್ಕೆ ಲಟ್ಟಿಸಿಕೊಳ್ಳಬೇಕು. ಇದೇ ರೀತಿ ಎಲ್ಲವನ್ನೂ ಮಾಡಿಕೊಳ್ಳಿ.
* ನಂತರ ಇಂದು ಪ್ಯಾನ್ ಬಿಸಿಗಿಟ್ಟು ಅದಕ್ಕೆ ಸ್ವಲ್ಪ ಬೆಣ್ಣೆ ಹಾಕಿ. ಬೆಣ್ಣೆ ಕರಗಿದ ಬಳಿಕ ಪರೋಟವನ್ನು ಅದರಲ್ಲಿ ಹಾಕಿ ಎರಡೂ ಬದಿ ಬೇಯಿಸಿಕೊಳ್ಳಿ.
* ಪರೋಟ ಬೆಂದ ಬಳಿಕ ಅದನ್ನು ಸರ್ವಿಂಗ್ ಪ್ಲೇಟ್‌ನಲ್ಲಿ ಹಾಕಿ ಬಿಸಿಬಿಸಿಯಾಗಿ ತಿನ್ನಲು ಕೊಡಿ. ಇದನ್ನೂ ಓದಿ: ಟ್ಯಾಂಗಿ ಫ್ಲೇವರ್ – ಮೊಳಕೆ ಕಾಳಿನ ಚಾಟ್ ರೆಸಿಪಿ
Web Stories