ಬೀಜಿಂಗ್: ರೆಸ್ಟೋರೆಂಟ್ನಲ್ಲಿ (Restaurant) ಬೆಂಕಿ ಕಾಣಿಸಿಕೊಂಡು 17 ಜನರು ಸಜೀವ ದಹನರಾದ ಘಟನೆ ಈಶಾನ್ಯ ಚೀನಾದಲ್ಲಿ (China) ನಡೆದಿದೆ.
ಚಾಂಗ್ಚುನ್ ನಗರದ ರೆಸ್ಟೋರೆಂಟ್ನಲ್ಲಿ ಬೆಂಕಿ (Fire) ಕಾಣಿಸಿಕೊಂಡಿದೆ. ಈ ವೇಳೆ ರೆಸ್ಟೋರೆಂಟ್ನಲ್ಲಿದ್ದ 17 ಮಂದಿ ಸಜೀವ ದಹನವಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ
ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಿ, ರೆಸ್ಟೋರೆಂಟ್ನಲ್ಲಿದ್ದ ಜನರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿ ತನಿಖೆ ನಡೆಯುತ್ತಿದೆ. ಚೀನಾದಲ್ಲಿ ಆಗಾಗ ಬೆಂಕಿ ಅನಾಹುತಗಳು ಸಂಭವಿಸುತ್ತಿರುತ್ತವೆ. ಇದನ್ನೂ ಓದಿ: ಗೃಹ ಬಂಧನದ ವದಂತಿಯ ಬೆನ್ನಲ್ಲೇ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ಚೀನಾ ಅಧ್ಯಕ್ಷ