ಬೀಜಿಂಗ್: ಭಾರತದೊಂದಿಗೆ (India) ತನ್ನ ಗಡಿ ಪರಿಸ್ಥಿತಿ ಸ್ಥಿರವಾಗಿದೆ ಎಂದು ಚೀನಾದ (China) ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್ ಹೇಳಿದರು.
ಕಳೆದ ವಾರ ಅರುಣಾಚಲ ಪ್ರದೇಶದ (Arunachal Pradesh) ತವಾಂಗ್‍ನಲ್ಲಿ (Tawang) ಚೀನಾ ಘರ್ಷಣೆ ನಡೆಸಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದ ನಂತರ ಈ ಹೇಳಿಕೆಯನ್ನು ಚೀನಾ ಸರ್ಕಾರ ನೀಡಿದೆ.
Advertisement
Advertisement
ಚೀನಾ-ಭಾರತದ ಗಡಿ ಪರಿಸ್ಥಿತಿಯು ಒಟ್ಟಾರೆ ಸ್ಥಿರವಾಗಿದೆ. ಎರಡೂ ಕಡೆಯ ಸಚಿವರು ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಗಡಿ ಸಮಸ್ಯೆಯ ಬಗ್ಗೆ ಅಡೆತಡೆಯಿಲ್ಲದ ಮಾತುಕತೆಯನ್ನು ನಡೆಸಿದ್ದೇವೆ. ಎರಡೂ ಕಡೆಯವರು ಸಹಿ ಮಾಡಿದ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಟ್ಟಾಗಿ ಚೀನಾ-ಭಾರತದ ಗಡಿ ಪ್ರದೇಶದ ಶಾಂತಿ ಮತ್ತು ನೆಮ್ಮದಿಯನ್ನು ಎತ್ತಿಹಿಡಿಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಚೀನಾ ಸೈನಿಕರು ಗಡಿ ನುಸುಳುವುದನ್ನು ಭಾರತ ತಡೆದಿದೆ; ನಮ್ಮ ಯೋಧರ ಧೈರ್ಯಕ್ಕೆ ಸಲಾಂ – ರಾಜನಾಥ್ ಸಿಂಗ್
Advertisement
Advertisement
ತವಾಂಗ್ ಸೆಕ್ಟರ್‌ನಲ್ಲಿ ಡಿಸೆಂಬರ್ 9ರ ಬೆಳಗ್ಗೆ ಗಡಿ ಕಾಯುತ್ತಿದ್ದ ಭಾರತ ಸೈನಿಕರನ್ನು ಚೀನಿ ಯೋಧರು ಕೆಣಕಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತದ ಸೈನಿಕರು ತಿರುಗೇಟು ನೀಡಿದ್ದು, ಎರಡು ಕಡೆ ಸೈನಿಕರ ಮಧ್ಯೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಎರಡು ಕಡೆಯಲ್ಲೂ ಸೈನಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ – ಅರುಣಾಚಲ ಪ್ರದೇಶದಲ್ಲಿ ವಾಯು ಗಸ್ತು ಆರಂಭಿಸಿದ ಭಾರತೀಯ ಸೇನೆ