ಚೀನಿಗಳಿಗೆ ವೀಸಾ ಬಂದ್ ಮಾಡಿದ ಬೆನ್ನಲ್ಲೇ ಭಾರತೀಯ ವಿದ್ಯಾರ್ಥಿಗಳಿಗೆ ಬನ್ನಿ ಎಂದ ಚೀನಾ

Public TV
1 Min Read
India China

ಬೀಜಿಂಗ್: ಚೀನಾದ ಪ್ರಜೆಗಳಿಗೆ ನೀಡಲಾಗಿದ್ದ ಪ್ರವಾಸಿ ವೀಸಾವನ್ನು ಅಮಾನತುಗೊಳಿಸಿ ಬಿಸಿ ಮುಟ್ಟಿಸಿದ ಬಳಿಕ ಈಗ ಭಾರತೀಯ ವಿದ್ಯಾರ್ಥಿಗಳಿಗೆ ದೇಶಕ್ಕೆ ಮರಳಲು ಚೀನಾ ಅನುಮತಿ ನೀಡಿದೆ.

ಕೋವಿಡ್ ಕಾರಣದಿಂದಾಗಿ ಬೀಜಿಂಗ್ ವೀಸಾ ಹಾಗೂ ವಿಮಾನ ನಿರ್ಬಂಧಗಳನ್ನು ವಿಧಿಸಿತ್ತು. ಇದೀಗ 2 ವರ್ಷಗಳ ಬಳಿಕ ಚೀನಾದಲ್ಲಿ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಭಾರತಕ್ಕೆ ತೆರಳಿದ್ದ ವಿದ್ಯಾರ್ಥಿಗಳಿಗೆ ಚೀನಾ ಮರಳುವಂತೆ ಅನುಮತಿ ನೀಡಿದೆ. ಇದನ್ನೂ ಓದಿ: ಚೀನಾ ಪ್ರಜೆಗಳ ಪ್ರವಾಸಿ ವೀಸಾ ಅಮಾನತುಗೊಳಿಸಿದ ಭಾರತ

china coronavirus covid

ಶುಕ್ರವಾರ ಚೀನಾ ವಿದ್ಯಾರ್ಥಿಗಳಿಗೆ ಮರಳಲು ಅನುಮತಿ ನೀಡುವ ಯೋಜನೆಯನ್ನು ಪ್ರಕಟಿಸಿದೆ. ಚೀನಾದ ವಿದೇಶಾಂಗ ಸಚಿವಾಲಯ ವಕ್ತಾರ ಝಾವೋ ಲಿಜಿಯಾನ್, ಚೀನಾದಲ್ಲಿ ಅಧ್ಯಯನಕ್ಕಾಗಿ ಭಾರತದಿಂದ ಮರಳುವ ವಿದ್ಯಾರ್ಥಿಗಳಿಗೆ ಚೀನಾ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ನಾವು ಇತರ ದೇಶಗಳ ವಿದ್ಯಾರ್ಥಿಗಳೊಂದಿಗೆ ಭಾರತಕ್ಕೂ ಚೀನಾಗೆ ಹಿಂದಿರುಗುವ ಕಾರ್ಯವಿಧಾನವನ್ನು ತಿಳಿಸಿದ್ದೇವೆ ಎಂದರು.

ಭಾರತೀಯ ವಿದ್ಯಾರ್ಥಿಗಳನ್ನು ಚೀನಾಗೆ ಕರೆಸಿಕೊಳ್ಳುವ ಕೆಲಸ ಈಗಾಗಲೇ ಪ್ರಾರಂಭಿಸಲಾಗಿದೆ. ಇದೀಗ ಭಾರತ ಚೀನಾಗೆ ಹಿಂದಿರುಗಬೇಕಾಗಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ನೀಡುವುದು ಮಾತ್ರವೇ ಬಾಕಿ ಉಳಿದಿದೆ ಎಂದರು.

ಈ ಹಿಂದಿನ ವರದಿಗಳ ಪ್ರಕಾರ 2019ರಲ್ಲಿ ಕೊರೋನಾ ವೈರಸ್ ಪ್ರಾರಂಭವಾದಾಗ 23,000ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಬಂದಿದ್ದರು. ಅವರಲ್ಲಿ ಹೆಚ್ಚಿನವರು ವೈದ್ಯಕೀಯ ವಿದ್ಯಾರ್ಥಿಗಳೇ ಇದ್ದರು. ವೈರಸ್ ಹರಡುವಿಕೆ ತಡೆಯಲು ಚೀನಾ ವಿಧಿಸಿದ ನಿರ್ಬಂಧಗಳಿಂದಾಗಿ ಭಾರತೀಯ ವಿದ್ಯಾರ್ಥಿಗಳು ಚೀನಾ ಮರಳಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಮಹಿಳೆಯರು, ಮಕ್ಕಳು ಭವಿಷ್ಯದ ಆತಂಕದಲ್ಲಿ ಬದುಕುತ್ತಿದ್ದಾರೆ: ವತ್ಸಲಾ ವರತ್ತನ

visa

ಬಿಸಿ ಮುಟ್ಟಿಸಿದ್ದ ಭಾರತ:
ಚೀನಾದ ವಿಶ್ವವಿದ್ಯಾನಿಲಯಗಳಲ್ಲಿ ದಾಖಲಾದ ಸುಮಾರು 22,000 ಭಾರತೀಯ ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಚೀನಾಗೆ ಭಾರತ ಸರ್ಕಾರ ಮನವಿ ಮಾಡಿತ್ತು. ಸಾಕಷ್ಟು ಬಾರಿ ಮನವಿ ಮಾಡಿದರೂ ಚೀನಾ ಅನುಮತಿ ನೀಡಿರಲಿಲ್ಲ. ಈ ಕಾರಣಕ್ಕೆ ಚೀನಾದ ಪ್ರಜೆಗಳಿಗೆ ನೀಡಲಾಗಿದ್ದ ಪ್ರವಾಸಿ ವೀಸಾವನ್ನು ಭಾರತ ಈ ವಾರದ ಆರಂಭದಲ್ಲಿ ಅಮಾನತುಗೊಳಿಸಿ ಬಿಸಿ ಮುಟ್ಟಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *