ಬೀಜಿಂಗ್: ಚೀನಾದ ಅಧ್ಯಕ್ಷ (Chinese President) ಕ್ಸಿ ಜಿನ್‌ಪಿಂಗ್ (Xi Jinping) ಅವರನ್ನು ಗೃಹ ಬಂಧನದಲ್ಲಿ (House Arrest) ಇರಿಸಲಾಗಿದೆ ಎಂಬ ವದಂತಿ ವ್ಯಾಪಕವಾಗಿ ಹರಡುತ್ತಿದ್ದ ಬೆನ್ನಲ್ಲೇ ಅವರು ಮಂಗಳವಾರ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 16 ರಂದು ಜಿನ್‌ಪಿಂಗ್ ಅವರು ಸಮರ್‌ಕಂಡರ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಹಿಂದಿರುಗಿದ ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಈ ಹಿನ್ನೆಲೆ ಅವರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಮುಖ್ಯಸ್ಥ ಸ್ಥಾನದಿಂದ ತೆಗೆದುಹಾಕಿ ಗೃಹಬಂಧನದಲ್ಲಿ ಇರಿಸಲಾಗಿದೆ ಎಂಬ ವದಂತಿಗಳು ಹರಿದಾಡಲಾರಂಭಿಸಿತ್ತು.
Advertisement
Advertisement
ವದಂತಿ ಏಕೆ ಹುಟ್ಟಿತು?
ಚೀನಾದಲ್ಲಿ ಕಳೆದ ವಾರ ಇಬ್ಬರು ಮಾಜಿ ಮಂತ್ರಿಗಳಿಗೆ ಮರಣದಂಡನೆ ಹಾಗೂ 4 ಅಧಿಕಾರಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ವರದಿಗಳ ಪ್ರಕಾರ, 6 ಮಂದಿ ಕೂಡಾ ರಾಜಕೀಯ ಬಣದ ಭಾಗವಾಗಿದ್ದರು. ಶಿಕ್ಷೆ ವಿಧಿಸಲಾದ 6 ಜನರೂ ಜಿನ್‌ಪಿಂಗ್ ಅವರ ವಿರೋಧಿ ಎನ್ನಲಾಗಿದೆ. ಈ ಹಿನ್ನೆಲೆ ಅವರ ವಿರುದ್ಧ ಪಕ್ಷವೇ ಗೃಹಬಂಧನದಲ್ಲಿ ಇರಿಸಿದೆ ಎಂಬ ವದಂತಿ ಹರಡಿತ್ತು. ಇದನ್ನೂ ಓದಿ: ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ರೆಡ್ ಅಲರ್ಟ್ – ಗುಪ್ತಚರ ಇಲಾಖೆ ಸೂಚನೆ ಏನು?
Advertisement
Advertisement
ವಿದೇಶದ ಮಾಧ್ಯಮಗಳು, ಫೇಸ್‌ಬುಕ್, ಟ್ವಿಟ್ಟರ್, ಯೂಟ್ಯೂಬ್ ಗೂ ಚೀನಾದಲ್ಲಿ ನಿರ್ಬಂಧ ಇರುವುದರಿಂದ ಅಲ್ಲಿ ಏನು ನಡೆಯುತ್ತದೆ ಎಂಬುದನ್ನು ನಿಖರವಾಗಿ ತಿಳಿಯುವುದು ಅಸಾಧ್ಯವಾಗಿದೆ. ಗೃಹ ಬಂಧನದ ವದಂತಿ ಹರಡಲು ಇದು ಕೂಡಾ ಕಾರಣವಾಗಿದೆ. ಇದನ್ನೂ ಓದಿ: ಉಗ್ರ ಸಂಘಟನೆಗಳ ಜೊತೆ ಲಿಂಕ್ – ಈ ಕ್ಷಣದಿಂದಲೇ PFI, 8 ಅಂಗ ಸಂಸ್ಥೆಗಳು ಬ್ಯಾನ್