ಕಲಬುರಗಿ: ಪರಿಶಿಷ್ಟ ಜಾತಿ ಮೀಸಲು ವಿಧಾನಸಭಾ ಕ್ಷೇತ್ರ ಚಿಂಚೋಳಿ ಉಪ ಚುನಾವಣೆಯಲ್ಲಿ 10 ಮಂದಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.
ನಾಮಪತ್ರ ವಾಪಸ್ ಪಡೆದುಕೊಳ್ಳಲು ಇಂದು ಕೊನೆಯ ದಿನವಾದ ಹಿನ್ನೆಲೆಯಲ್ಲಿ, ನೋಂದಾಯಿತ ಮತ್ತು ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳನ್ನು ಹೊರತು ಪಡಿಸಿ ಪಕ್ಷೇತರ 10 ಜನ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ್ದಾರೆ.
ಸದ್ಯ ಕಣದಲ್ಲಿ 17 ಅಭ್ಯರ್ಥಿಗಳು ಉಳಿದುಕೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಈ ಬಾರಿ ಒಟ್ಟು 27 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 10 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದದ್ದು ಬಿಟ್ಟರೆ ಯಾವುದೇ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿಲ್ಲ.
ಬಿಜೆಪಿಯ ಮುಖಂಡ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಚುನಾವಣೆ ಘೋಷಣೆ ಬಳಿಕ ಎರಡೂ ಪಕ್ಷಗಳ ರಾಜ್ಯದ ಪ್ರಮುಖ ನಾಯಕರು ಪ್ರಚಾರ ಕಾರ್ಯಕ್ರಮದ ಪಾಲ್ಗೊಂಡಿಲ್ಲ. ಆದರೆ ಇಂದು ನಾಮಪತ್ರದ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆಯಿಂದ ಎರಡೂ ಪಕ್ಷಗಳ ಪ್ರಮುಖ ನಾಯಕರು ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಾಧ್ಯತೆಯಿದೆ.


