– ರಕ್ಷಣೆಗೆ ಕ್ಸಿ ಜಿನ್‌ಪಿಂಗ್ ಆದೇಶ
ಬೀಜಿಂಗ್: ಮೀನುಗಾರಿಕೆಗೆ ತೆರಳಿದ್ದ ಚೀನಾದ (China) ದೋಣಿಯೊಂದು (Fishing Boat) ಹಿಂದೂ ಮಹಾಸಾಗರದಲ್ಲಿ (Indian Ocean) ಮುಳುಗಡೆಯಾಗಿದ್ದು, ಅದರಲ್ಲಿದ್ದ 39 ಜನರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದೋಣಿಯಲ್ಲಿ ಚೀನಾದ 17 ಪ್ರಜೆಗಳು, ಇಂಡೋನೇಷ್ಯಾದ 17 ಜನ ಹಾಗೂ ಫಿಲಿಪೈನ್ಸ್‌ನ ಐವರು ಇದ್ದರು ಎಂದು ಚೀನಾ ಸೆಂಟ್ರಲ್ ಟೆಲಿವಿಷನ್ (CCTV) ತಿಳಿಸಿದೆ.
ಇದೀಗ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ಹಾಗೂ ಪ್ರಧಾನಿ ಲಿ ಕಿಯಾಂಗ್ (Li Qiang)ವಿದೇಶಗಳಲ್ಲಿರುವ ಚೀನಾದ ರಾಜತಾಂತ್ರಿಕರಿಗೆ ಹಾಗೂ ಕೃಷಿ ಮತ್ತು ಸಾರಿಗೆ ಸಚಿವಾಲಯಗಳಿಗೆ ಬದುಕುಳಿದವರನ್ನು ಹುಡುಕಲು ಹಾಗೂ ರಕ್ಷಿಸಲು ಆದೇಶಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಲೇಡಿ ಡಾನ್‌ನಿಂದ ಉದ್ಯಮಿ ಮೇಲೆ ಹಲ್ಲೆ
ಆಸ್ಟ್ರೇಲಿಯಾ ಮತ್ತು ಇತರ ಹಲವು ದೇಶಗಳಿಂದ ರಕ್ಷಣಾ ತಂಡಗಳು ಹುಡುಕಾಟಕ್ಕಾಗಿ ಘಟನಾ ಸ್ಥಳಕ್ಕೆ ತೆರಳಿವೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಚೀನಾ 2 ಹಡಗುಗಳನ್ನು ನಿಯೋಜಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಮೆರಿಕಕ್ಕೆ ಹಾರಲಿದ್ದಾರೆ ರಾಹುಲ್ – 10 ದಿನ ಪ್ರವಾಸ