ಲಂಡನ್: ಬ್ರಿಟನ್(Britain)ನ ರಾಣಿ 2ನೇ ಎಲಿಜಬೆತ್(Queen Elizabeth II) ಅವರ ಅಂತ್ಯಕ್ರಿಯೆ(Funeral) ಸೆಪ್ಟೆಂಬರ್ 19ರಂದು ನಡೆಯಲಿದೆ. ಅದಕ್ಕೂ ಮುನ್ನ ಅವರ ಮೃತದೇಹವನ್ನು ಸಂಸತ್ತಿನ ಒಳಗೆ ಅಂತಿಮ ದರ್ಶನಕ್ಕೆಂದು ಇಡಲಾಗಿದೆ. ಆದರೆ ಚೀನಾಗೆ(China) ಅಂತಿಮ ದರ್ಶನದ ಅನುಮತಿಯನ್ನು ನಿರಾಕರಿಸಲಾಗಿದೆ.
ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ ಉಯಿಘರ್ ಮುಸ್ಲಿಮರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದ ಬ್ರಿಟನ್‌ನ ಐವರು ಸಂಸದರ ಮೇಲೆ ಚೀನಾ ನಿರ್ಬಂಧ ಹೇರಿತ್ತು. ಈ ಹಿನ್ನೆಲೆ ಚೀನಾದ ಪ್ರತಿನಿಧಿಗಳಿಗೆ ಆಹ್ವಾನ ನೀಡುವ ಬಗ್ಗೆ ಬ್ರಿಟನ್ ಕಳವಳ ವ್ಯಕ್ತಪಡಿಸಿದೆ. ಈ ಕಾರಣಕ್ಕೆ ಹೌಸ್ ಆಫ್ ಕಾಮನ್ಸ್‌ನ ಸ್ಪೀಕರ್ ಸರ್ ಲಿಂಡ್ಸೆ ಹೊಯ್ಲ್ ಅವರು ಚೀನಾದ ನಿಯೋಗಕ್ಕೆ ಅನುಮತಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಶಾಸಕ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು
Advertisement
Advertisement
ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರ ವಕ್ತಾರರು ವಿದೇಶಾಂಗ ಕಚೇರಿಯಿಂದ ಸಲಹೆಯನ್ನು ಪಡೆದು, ಬಳಿಕ ಅತಿಥಿ ಪಟ್ಟಿಯನ್ನು ತಯಾರಿಸಲಾಗುವುದು ಎಂದು ತಿಳಿಸಿದ್ದಾರೆ. ಬ್ರಿಟನ್ ಸಂಪ್ರದಾಯದ ಪ್ರಕಾರ, ಬ್ರಿಟನ್ ರಾಜತಾಂತ್ರಿಕ ಸಂಬಂಧ ಹೊಂದಿರುವ ರಾಷ್ಟ್ರಗಳ ಪ್ರತಿನಿಧಿಗಳನ್ನು ಆಹ್ವಾನಿಸುತ್ತದೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ – ನಾಳೆ ಹುಟ್ಟುವ ಮಕ್ಕಳಿಗೆ ಚಿನ್ನದುಂಗುರ ನೀಡಲಿದೆ ಬಿಜೆಪಿ
Advertisement
ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಚೀನಾ ಭಾಗವಹಿಸಲಿದೆ ಎನ್ನಲಾಗಿದ್ದು, ಚೀನಾದ ಉಪಾಧ್ಯಕ್ಷ ವಾಂಗ್ ಕಿಶನ್ ಚೀನಾವನ್ನು ಪ್ರತಿನಿಧಿಸುವ ನಿರೀಕ್ಷೆಯಿದೆ. ರಾಣಿಯ ಅಂತ್ಯಕ್ರಿಯೆಯಲ್ಲಿ ವಿಶ್ವದ ನಾಯಕರು, ರಾಜವಂಶಸ್ಥರು ಮತ್ತು ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಬ್ರಿಟಿಷ್ ವಿದೇಶಾಂಗ ಕಚೇರಿ ಗುರುವಾರ ತಿಳಿಸಿದೆ.