ಬೀಜಿಂಗ್: ಚೀನಾದ ವುಹಾನ್‌ನಲ್ಲಿ ಕೋವಿಡ್-19 ಕುರಿತು ವರದಿ ಮಾಡಿ ಬಂಧನಕ್ಕೊಳಗಾಗಿದ್ದ ಪತ್ರಕರ್ತೆ ಜೈಲಿನಲ್ಲೇ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆಂದು ಕುಟುಂಬದ ಮೂಲಗಳು ಹೇಳಿವೆ. ಆಕೆ ಬದುಕುಳಿಯುವ ಸ್ಥಿತಿಯಲ್ಲಿಲ್ಲ. ಕೂಡಲೇ ಬಿಡುಗಡೆ ಮಾಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ.
ಝಾಂಗ್ ಜಾನ್ (38) ಅವರು ಫೆಬ್ರವರಿ 2020ರಲ್ಲಿ ವುಹಾನ್‌ಗೆ ಭೇಟಿ ನೀಡಿ ಕೋವಿಡ್ ಸಾಂಕ್ರಾಮಿಕ ಕುರಿತು ವರದಿ ಮಾಡಿದ್ದರು. ಈ ವೇಳೆ ಅಧಿಕಾರಿಗಳಿಗೆ ಪ್ರಶ್ನೆಗಳನ್ನು ಕೇಳಿ ವಿಡಿಯೊ ಮಾಡಿಕೊಂಡಿದ್ದರು. ನಂತರ ಆಕೆಯನ್ನು ಮೇ 2020ರಲ್ಲಿ ಬಂಧಿಸಲಾಗಿತ್ತು. ಡಿಸೆಂಬರ್‌ನಲ್ಲಿ ಪತ್ರಕರ್ತೆಗೆ ನಾಲ್ಕು ವರ್ಷಗಳ ಜೈಲು ಶಿಕ್ಷ ವಿಧಿಸಿ ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: ಅಪ್ಪು ಸದಾ ನಮ್ಮ ಹೃದಯದಲ್ಲಿ ನಗುತ್ತಿರುತ್ತಾರೆ – ಪುನೀತ್ ನೆನೆದು ಬಿಕ್ಕಿ, ಬಿಕ್ಕಿ ಅತ್ತ ಸೂರ್ಯ
ಬಂಧನಕ್ಕೊಳಗಾಗಿರುವ ನನ್ನ ಸಹೋದರಿ ಹೆಚ್ಚು ದಿನ ಬದುಕುವಂತೆ ಕಾಣುತ್ತಿಲ್ಲ ಎಂದು ಪತ್ರಕರ್ತೆಯ ಸಹೋದರ ಝಾಂಗ್ ಜು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತೀಯರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ
ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಪತ್ರಕರ್ತೆ ಝಾಂಗ್‌ಗೆ ಬಲವಂತವಾಗಿ ಮೂಗಿನಲ್ಲಿ ಪೈಪ್ ಹಾಕಿ ದ್ರವರೂಪದ ಆಹಾರ ನೀಡಲಾಗುತ್ತಿದೆ. ಆಕೆಯ ಸ್ಥಿತಿ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆಕೆಯ ಆಪ್ತ ಮೂಲಗಳು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿವೆ.
ನನ್ನ ಸಹೋದರಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹಾಗೂ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ಚೀನಾ ಸರ್ಕಾರ ಕೂಡಲೇ ಆಕೆಯನ್ನು ಬಿಡುಗಡೆ ಮಾಡಲು ಕ್ರಮವಹಿಸಬೇಕು ಎಂದು ಸಹೋದರ ಝಾಂಗ್ ಜು ಮನವಿ ಮಾಡಿದ್ದಾರೆ.