ನವದೆಹಲಿ: 100 ಕೋಟಿ ರೂ. ಮೊತ್ತದ ಬೃಹತ್ ಸೈಬರ್ ವಂಚನೆ (Cyber Fraud) ಪ್ರಕರಣದಲ್ಲಿ ಭಾಗಿಯಾಗಿರುವ ಚೀನಾ ಪ್ರಜೆ ಫಾಂಗ್ ಚೆಂಜಿನ್‌ನನ್ನು ದೆಹಲಿಯಲ್ಲಿ ಇಂದು (ಮಂಗಳವಾರ) ಸೈಬರ್ ಸೆಲ್ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಫಾಂಗ್ ಚೆಂಜಿನ್ ವಾಟ್ಸಾಪ್ ಗ್ರೂಪ್‌ಗಳ ಮೂಲಕ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಹಗರಣಗಳಲ್ಲಿ ಭಾಗಿಯಾಗಿದ್ದ. ಸಂತ್ರಸ್ತರಲ್ಲಿ ಒಬ್ಬರಾದ ಸುರೇಶ್ ಕೋಳಿಚಿಯಿಲ್ ಅಚ್ಯುತನ್ ಅವರು ಸೈಬರ್ ಕ್ರೈಂ (Cyber Crime) ಪೋರ್ಟಲ್‌ನಲ್ಲಿ 43.5 ಲಕ್ಷ ರೂ. ವಂಚಿಸಿದ್ದಾನೆ ಎಂದು ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ದೂರಿನ ಪ್ರಕಾರ, ಅವರನ್ನು ವಂಚನೆಯ ಷೇರು ಮಾರುಕಟ್ಟೆಯ ತರಬೇತಿ ಅವಧಿಗಳಿಗೆ ಆಮಿಷವೊಡ್ಡಲಾಯಿತು. ನಂತರ ಹಣವನ್ನು ಹಲವಾರು ವಹಿವಾಟುಗಳಲ್ಲಿ ಹೂಡಿಕೆ ಮಾಡುವಂತೆ ಹೇಳಿ ವಂಚನೆ ಎಸಗಲಾಗಿದೆ. ನಂತರ ಈ ಹಣವನ್ನು ವಂಚಕರು ನಿಯಂತ್ರಿಸಲ್ಪಡುವ ಹಲವು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ವಕ್ಫ್ ಬೋರ್ಡ್ ರಾಕ್ಷಸನನ್ನ ಮೋದಿ ಸಂಹಾರ ಮಾಡ್ತಾರೆ: ಆರ್. ಅಶೋಕ್
ಏಪ್ರಿಲ್‌ನಲ್ಲಿ 1.25 ಲಕ್ಷ ರೂ. ವಂಚನೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿಯ ಮುಂಡ್ಕಾದಲ್ಲಿರುವ ಮಹಾಲಕ್ಷ್ಮಿ ಟ್ರೇಡರ್ಸ್ ಹೆಸರಿನಲ್ಲಿ ಬ್ಯಾಂಕ್ ಖಾತೆ ಇತ್ತು. ಅಪರಾಧಕ್ಕೆ ಸಂಬಂಧಿಸಿದ ಮೊಬೈಲ್ ಫೋನ್ ಕೂಡ ಪತ್ತೆಯಾಗಿದೆ. ಇದು ಆರೋಪಿ ಚೆಂಜಿನ್‌ನನ್ನು ಗುರುತಿಸಲು ಸಹಾಯವಾಯಿತು. ಆರೋಪಿಗಳು ದೆಹಲಿಯ ಸಫ್ದರ್‌ಜಂಗ್ ಎನ್‌ಕ್ಲೇವ್‌ನಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು | ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ – ಯುವತಿ ಸಜೀವ ದಹನ
ಅಪರಾಧಗಳನ್ನು ನಡೆಸಲು ಬಳಸಲಾದ ಫೋನ್‌ನಲ್ಲಿ ಚೆಂಜಿನ್ ಮತ್ತು ಅವನ ಸಹಚರರ ನಡುವೆ ವಾಟ್ಸಾಪ್ ಸಂಭಾಷಣೆಗಳು ಸೇರಿದಂತೆ ಹಲವಾರು ಸಾಕ್ಷಿಗಳು ಸಿಕ್ಕಿದೆ. ಈ ಸಾಕ್ಷಿ ಮೇರೆಗೆ ಆತನನ್ನು ಬಂಧಿಸಲಾಗಿದೆ. ಆರೋಪಿಯು ವಂಚನೆಗೆ ಬಳಸಲಾದ ಮೊಬೈಲ್ ಸಂಖ್ಯೆಗೆ ರೀಚಾರ್ಜ್ ಮಾಡುವಂತೆ ತನ್ನ ಸಹಾಯಕನಿಗೆ ಸೂಚಿಸಿದ್ದಾನೆ. ಸೈಬರ್ ಕ್ರೈಮ್ ಪೋರ್ಟಲ್‌ನಲ್ಲಿ ಕನಿಷ್ಠ 17 ದೂರುಗಳನ್ನು ದಾಖಲಿಸಲಾಗಿದೆ. ಎಲ್ಲವೂ ಒಂದೇ ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾಗಿದೆ. ದೂರುಗಳ ಪ್ರಕಾರ, 100 ಕೋಟಿ ರೂ. ವಂಚನೆಯಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ತನಿಖೆಯಿಂದ ಆಂಧ್ರಪ್ರದೇಶ (Andhra Pradesh) ಮತ್ತು ಉತ್ತರ ಪ್ರದೇಶದಲ್ಲಿ (Uttar Pradesh) ಸೈಬರ್ ಕ್ರೈಮ್ ಮತ್ತು ಮನಿ ಲಾಂಡರಿಂಗ್ ಒಳಗೊಂಡತೆ ಇತರ ಎರಡು ಮಹತ್ವದ ವಂಚನೆ ಪ್ರಕರಣಗಳಿಗೂ ಫಾಂಗ್ ಚೆಂಜಿನ್‌ಗೂ ಸಂಬಂಧವಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ಶಹದಾರ, ಪ್ರಶಾಂತ್ ಗೌತಮ್ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ವಕ್ಫ್ ಆಸ್ತಿ ವಿವಾದ – ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ