ಬೀಜಿಂಗ್: ತನ್ನ ಮೂತ್ರದಲ್ಲಿ ರಕ್ತ ಮತ್ತು ನಿಯಮಿತವಾಗಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 33 ವರ್ಷದ ಚೀನಾ ವ್ಯಕ್ತಿಯೊಬ್ಬ ವೈದ್ಯರನ್ನು ಸಂಪರ್ಕಿಸಿದ ಬಳಿಕ ಈತ ಅಂಡಾಶಯ ಹಾಗೂ ಗರ್ಭಾಶಯವನ್ನು ಹೊಂದಿರುವ ವಿಚಾರ ತಿಳಿದು ಆಘಾತಕ್ಕೊಳಗಾಗಿದ್ದಾನೆ.
ಚೆನ್ ಲಿ ಎಂದು ಗುರುತಿಸಿಕೊಂಡಿರುವ ವ್ಯಕ್ತಿ, ಪ್ರೌಢಾವಸ್ಥೆಯಲ್ಲಿ ತನ್ನ ಅನಿಯಮಿತ ಮೂತ್ರ ವಿಸರ್ಜನೆಯನ್ನು ಸರಿಪಡಿಸಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ಅಂದರೆ ಸುಮಾರು 20 ವರ್ಷಗಳಿಂದ ಈತ ಮೂತ್ರದಲ್ಲಿ ರಕ್ತ ಮತ್ತು ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ.
Advertisement
Advertisement
ಸುಮಾರು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದ್ದರಿಂದ ವೈದ್ಯರು ವ್ಯಕ್ತಿಗೆ ಅಪೆಂಡಿಸೈಟಿಸ್ ಎಂದು ರೋಗನಿರ್ಣಯ ಮಾಡಿದರು. ಈ ರೋಗಕ್ಕಾಗಿ ಚಿಕಿತ್ಸೆ ನೀಡಿದ ನಂತರವೂ ರೋಗಲಕ್ಷಣಗಳು ಮುಂದುವರಿಯಿತು. ಇದನ್ನೂ ಓದಿ: ಅಂಬುಲೆನ್ಸ್ ಸಿಗದೇ ತಮ್ಮನ ಶವವನ್ನು ಮಡಿಲಲ್ಲಿಟ್ಟುಕೊಂಡು ಬೀದಿಯಲ್ಲಿ ಕುಳಿತ ಬಾಲಕ
Advertisement
ಕಳೆದ ವರ್ಷ ಸಂಪೂರ್ಣ ವೈದ್ಯಕೀಯ ತಪಾಸಣೆ ನಡೆಸಿದ ವೇಳೆ ವ್ಯಕ್ತಿ ಸ್ತ್ರೀ ಲೈಂಗಿಕ ವರ್ಣತಂತುಗಳನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದೆ. ಮತ್ತೊಂದು ವೈದ್ಯಕೀಯ ತಪಾಸಣೆಯಲ್ಲಿ ಈತ ಗರ್ಭಾಶಯ ಹಾಗೂ ಅಂಡಾಶಯ ಸೇರಿದಂತೆ ಸ್ತ್ರೀ ಸಂತಾನೋತ್ಪತ್ತಿ ಅಂಗಗಳನ್ನು ಹೊಂದಿದ್ದಾನೆ ಎಂಬ ಸತ್ಯ ಬೆಳಕಿಗೆ ಬಂದಿದೆ.
Advertisement
ಚೆನ್ ಲಿಗೆ ಪುರುಷ ಲೈಂಗಿಕ ಹಾರ್ಮೋನ್ ಆಂಡ್ರೊಜೆನ್ ಮಟ್ಟಗಳು ಸರಾಸರಿಗಿಂತ ಕಮ್ಮಿ ಇವೆ. ಆದರೆ ಸ್ತ್ರೀ ಲೈಂಗಿಕ ಹಾರ್ಮೋನುಗಳ ಮಟ್ಟಗಳು ಮತ್ತು ಅಂಡಾಶಯದ ಚಟುವಟಿಕೆಯು ಆರೋಗ್ಯಕರ ವಯಸ್ಕ ಮಹಿಳೆಯರಲ್ಲಿ ಕಂಡುಬರುವಂತೆಯೇ ಇದೆ. ಹೀಗಾಗಿ ಗಂಡು ಮತ್ತು ಹೆಣ್ಣು ಅಂಗಗಳೊಂದಿಗೆ ಜನಿಸಿರುವ ಇಂಟರ್ ಸೆಕ್ಸ್ ಎಂದು ವೈದ್ಯರು ಚೆನ್ ಲಿಗೆ ತಿಳಿಸಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಚೆನ್ ಲಿ ತನ್ನ ಸ್ತ್ರಿ ಸಂತಾನೋತ್ಪತ್ತಿ ಅಂಗಗಳನ್ನು ತೆಗೆದುಹಾಕಲು ನಿರ್ಧರಿಸಿ, ಕಳೆದ ತಿಂಗಳು ಮೂರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲೇ ಅಡುಗೆ ಮಾಡಿ ತಿಂದ ಪ್ರತಿಭಟನಾಕಾರರು
ಈ ಹಂತದಿಂದ ವ್ಯಕ್ತಿ ಸಾಮಾನ್ಯ ಮನುಷ್ಯರಂತೆ ಜೀವನ ನಡೆಸಬಲ್ಲನು. ಆದರೆ ಅವನು ಸಂತಾನೋತ್ಪತ್ತಿ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವನ ವೃಷಣಗಳು ವೀರ್ಯವನ್ನು ಉತ್ಪಾದಿಸಲು ಸಾಧ್ಯವಿಲ್ಲ. ಇದು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರದಿದ್ದರೂ, ಇದರಿಂದ ಕೆಲವರು ಮಾನಸಿಕವಾಗಿ ಆಘಾತಕ್ಕೊಳಗಾಗುವ ಸಾಧ್ಯತೆ ಇರುತ್ತದೆ. ಸದ್ಯ ಶಸ್ತ್ರ ಚಿಕಿತ್ಸೆಯ ಬಳಿಕ ಚೆನ್ ಲಿ ಬೇಗನೆ ಗುಣಮುಖನಾಗಿದ್ದು, ಆತ್ಮವಿಶ್ವಾಸ ಮತ್ತಷ್ಟು ಬಲವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.