ನವದೆಹಲಿ: ಚೀನಾ (China) ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ಅವರು ಮುಂದಿನ ವಾರ ಭಾರತದಲ್ಲಿ (India) ನಡೆಯಲಿರುವ ಜಿ20 ಶೃಂಗಸಭೆಯಿಂದ (G20 Summit) ಹೊರಗುಳಿಯುವ ಸಾಧ್ಯತೆ ಇದೆಯೆಂದು ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 9-10 ರಂದು ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಜಿನ್‌ಪಿಂಗ್ ಬದಲು ಚೀನಾದ ಪ್ರತಿನಿಧಿಯಾಗಿ ಲಿ ಕಿಯಾಂಗ್ ಅವರು ಭಾಗವಹಿಸುವ ನಿರೀಕ್ಷೆಯಿದೆ.
ಜಿ20 ಶೃಂಗಸಭೆಯಲ್ಲಿ ಕ್ಸಿ ಜಿನ್‌ಪಿಂಗ್ ಭಾಗವಹಿಸುವುದಕ್ಕೆ ಸಂಬಂಧಪಟ್ಟಂತೆ ಭಾರತ ಹಾಗೂ ಚೀನಾದ ವಿದೇಶಾಂಗ ಸಚಿವಾಲಯಗಳ ವಕ್ತಾರರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಆಗಮನ – ಬಿಎಸ್‌ವೈ, ಎಂಬಿಪಿ ಪ್ರಯಾಣ
ಕೆಲ ದಿನಗಳ ಹಿಂದಷ್ಟೇ ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir putin) ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ತಮ್ಮ ಮೇಲೆ ವಾರಂಟ್ ಹೊರಡಿಸಿರುವ ಹಿನ್ನೆಲೆ ಜಿ20 ಶೃಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಬದಲು ವಿದೇಶಾಂಗ ಸಚಿವ ಸರ್ಗೇಯ್ ಲಾವ್ರೋವ್ ಅವರನ್ನು ಕಳುಹಿಸುವುದಾಗಿ ಘೋಷಿಸಿದ್ದಾರೆ.
ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಬಬ್ರಡಾರ್ ಕೂಡಾ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಇದು ಪುಕ್ಕಲು ಸರ್ಕಾರ, ಬೆದರಿಕೆಗೆ ಜಗ್ಗುವುದಿಲ್ಲ: ಚಕ್ರವರ್ತಿ ಸೂಲಿಬೆಲೆ
Web Stories