ನವದೆಹಲಿ: ಉತ್ತರ ದೆಹಲಿಯಲ್ಲಿ (Delhi) ಟಿಬೆಟಿಯನ್ ನಿರಾಶ್ರಿತರು ವಾಸವಿದ್ದ ಸ್ಥಳದಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ಶಂಕೆಯ ಮೇಲೆ ಚೀನಾದ ಮಹಿಳೆಯನ್ನು (Chinese woman) ಪೊಲೀಸರು (Delhi Police) ಬಂಧಿಸಿರುವುದಾಗಿ ತಿಳಿಸಿದ್ದಾರೆ.
ವರದಿಗಳ ಪ್ರಕಾರ ಮಹಿಳೆಯ ಗುರುತಿನ ಪತ್ರದಲ್ಲಿ ಆಕೆಯ ಹೆಸರು ಡೋಲ್ಮಾ ಲಾಮಾ ಎಂದು ಬರೆಯಲಾಗಿದೆ. ಆಕೆಯ ವಿಳಾಸ ನೇಪಾಳದ (Nepal) ರಾಜಧಾನಿ ಕಠ್ಮಂಡು ಎಂದು ತೋರಿಸಿದೆ. ಆದರೆ ಆಕೆಯ ನಿಜ ಹೆಸರು ಕೈ ರೂವೋ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್ ಬಳಿ ಇರುವ ಟಿಬೆಟಿಯನ್ ನಿರಾಶ್ರಿತರ ಕಾಲೋನಿ ಮಜ್ನು ಕಾ ತಿಲ್ಲಾದಲ್ಲಿ ಆಕೆ ವಾಸವಿದ್ದಳು. ಆಕೆ ಬೌದ್ಧ ಸನ್ಯಾಸಿಗಳಂತೆ ಸಾಂಪ್ರದಾಯಿಕ ಕೆಂಪು ನಿಲುವಂಗಿ ಧರಿಸಿಕೊಂಡು, ಕೂದಲನ್ನೂ ಚಿಕ್ಕದಾಗಿ ಕತ್ತರಿಸಿಕೊಂಡಿದ್ದಳು. ಇದನ್ನೂ ಓದಿ: ಬೆಂಗ್ಳೂರಲ್ಲಿ ಆಯೋಧ್ಯೆ ತೀರ್ಪು ವಿರೋಧಿಸಿ, ಗಲಾಟೆಗೆ ಕರಪತ್ರ ಹಂಚಿಕೆ – PFI ಸಂಘಟನೆಯ ಕುತಂತ್ರ ಮತ್ತಷ್ಟು ಬಯಲು
Advertisement
ಈ ಬಗ್ಗೆ ಮಹಿಳೆಯ ವಿದೇಶಿ ಪ್ರಯಾಣದ ದಾಖಲೆಗಳನ್ನು ಹುಡುಕಿದಾಗ ಆಕೆ 2019ರಲ್ಲಿ ಚೀನಾದ ಪಾಸ್‌ಪೋರ್ಟ್ ಬಳಸಿ ಭಾರತಕ್ಕೆ ಬಂದಿರುವುದು ತಿಳಿದುಬಂದಿದೆ. ಆಕೆಯನ್ನು ವಿಚಾರಿಸಿದಾಗ ಚೀನಾದ ಕಮ್ಯೂನಿಸ್ಟ್ ಪಕ್ಷದ ಕೆಲ ನಾಯಕರು ತನ್ನನ್ನು ಕೊಲ್ಲಲು ಬಯಸಿದ್ದರು ಎಂದು ಹೇಳಿಕೊಂಡಿದ್ದಾಳೆ.
Advertisement
ಮಹಿಳೆ ಇಂಗ್ಲಿಷ್, ಮ್ಯಾಂಡರಿನ್ ಹಾಗೂ ನೇಪಾಳಿ ಭಾಷೆಗಳನ್ನು ತಿಳಿದಿದ್ದಾಳೆ. ಆಕೆ ಬೇಹುಗಾರಿಕೆ ಕೆಲಸಗಳಲ್ಲಿ ಭಾಗಿಯಾಗಿದ್ದಾಳೆಯೇ ಎಂಬುದನ್ನು ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದಾರೆ. ಇದನ್ನೂ ಓದಿ: ಕುರಾನ್ ಮಾತ್ರವಲ್ಲ, ಭಗವದ್ಗೀತೆ ಕೂಡಾ ಜಿಹಾದ್ ಕಲಿಸುತ್ತದೆ: ಶಿವರಾಜ್ ಪಾಟೀಲ್