ಬೇಡ ಎಂದರೂ ಬಿಡ್ಲಿಲ್ಲ, ನೆಲಕ್ಕೆ ಕೆಡವಿ ಮಹಿಳೆಗೆ ಕೋವಿಡ್ ಪರೀಕ್ಷೆ – ವೀಡಿಯೋ ವೈರಲ್

ಬೀಜಿಂಗ್: ಚೀನಾದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಪರೀಕ್ಷೆಯನ್ನು ತೀವ್ರಗೊಳಿಸಲಾಗಿದೆ. ದೇಶದಲ್ಲಿ ಉಲ್ಬಣಿಸುತ್ತಿರುವ ಕೋವಿಡ್ ಹಾಗೂ ಲಾಕ್‌ಡೌನ್‌ನಿಂದ ಜನ ಆತಂಕಗೊಂಡಿದ್ದಾರೆ. ಸೋಂಕಿತರು ಕಠಿಣ ನಿಯಮಗಳನ್ನು ಪಾಲಿಸಬೇಕೆಂಬ ಭಯದಿಂದ ಅನೇಕರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲೂ ಹಿಂಜರಿಯುತ್ತಿದ್ದಾರೆ.
这个强行检测姿势应该让全世界看一看🤬😡 pic.twitter.com/PUwnfCXF4t
— 浩哥i✝️i🇺🇸iA2 (@S7i5FV0JOz6sV3A) April 27, 2022
ಚೀನಾದಲ್ಲಿ ಮಹಿಳೆಯೊಬ್ಬರಿಗೆ ಕೋವಿಡ್ ಪರೀಕ್ಷೆ ಮಾಡಲು ಆರೋಗ್ಯ ಸಿಬ್ಬಂದಿ ಹರಸಾಹಸಪಟ್ಟ ಘಟನೆ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೊರೊನಾ ಪರೀಕ್ಷೆಗೆ ಒಳಗಾಗಲು ಮಹಿಳೆ ನಿರಾಕರಿಸುತ್ತಾಳೆ. ಈ ವೇಳೆ ಆಕೆಯನ್ನು ನೆಲಕ್ಕೆ ಕೆಡವಿ ಆರೋಗ್ಯ ಸಿಬ್ಬಂದಿ ಕೊರೊನಾ ಪರೀಕ್ಷೆ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ
Chinese government breaking this grandpa's home to force him take a mandatory Covid test. pic.twitter.com/oZ6dGMfFjt
— Songpinganq (@songpinganq) March 19, 2022
ಮತ್ತೊಂದು ವೀಡಿಯೋದಲ್ಲಿ ವೃದ್ಧೆಯೊಬ್ಬರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಾರೆ. ಆಗ ನಾಲ್ಕೈದು ಮಂದಿ ಆಕೆಯನ್ನು ಹಿಡಿದು, ಕೊರೊನಾ ಪರೀಕ್ಷೆ ಮಾಡುತ್ತಾರೆ. ಇದನ್ನೂ ಓದಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ
ಇನ್ನೊಂದು ವೀಡಿಯೋದಲ್ಲಿ ವ್ಯಕ್ತಿಯೊಬ್ಬನನ್ನು ನೆಲದ ಮೇಲೆ ಕೆಡವಿ ಬಲವಂತವಾಗಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಚೀನಾದಲ್ಲಿ ಜನರು ಕೋವಿಡ್ ಪರೀಕ್ಷೆಗೆ ಒಳಗಾಗಲು ಹಿಂಜರಿಯುತ್ತಿರುವ ಬಗ್ಗೆ ಅನೇಕ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.