ಚಿನ್ಮಯ್ ಕೃಷ್ಣ ದಾಸ್‌ರನ್ನು ಅನ್ಯಾಯವಾಗಿ ಬಂಧಿಸಲಾಗಿದೆ – ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ

Public TV
1 Min Read
Sheikh Hasina 1

ಢಾಕಾ: ಇಸ್ಕಾನ್‌ನ ಚಿನ್ಮಯ್ ಕೃಷ್ಣ ದಾಸ್ (Chinmoy Krishna Das) ಅವರನ್ನು ಅನ್ಯಾಯವಾಗಿ ಬಂಧಿಸಲಾಗಿದೆ ಎಂದು ಬಾಂಗ್ಲಾದೇಶ (Bangladesh) ಮಾಜಿ ಪ್ರಧಾನಿ ಶೇಖ್ ಹಸೀನಾ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಇಸ್ಕಾನ್‌ನ ಪ್ರಮುಖ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರನ್ನು ಬಂಧಿಸಿದ ವಿಚಾರ ಖಂಡಿಸಿ ಶೇಖ್ ಹಸೀನಾ ( Sheikh Hasina) ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಚಿನ್ಮಯ್ ಕೃಷ್ಣರನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 4ನೇ ಬಾರಿ ಜಾರ್ಖಂಡ್‌ ಸಿಎಂ ಆಗಿ ಹೇಮತ್‌ ಸೊರೆನ್‌ ಪ್ರಮಾಣವಚನ – INDIA ನಾಯಕರು ಭಾಗಿ

ಟ್ವೀಟ್‌ನಲ್ಲಿ ಏನಿದೆ?
ಸನಾತನ ಧರ್ಮ ಸಮುದಾಯದ ಉನ್ನತ ನಾಯಕನನ್ನು ಅನ್ಯಾಯವಾಗಿ ಬಂಧಿಸಲಾಗಿದೆ. ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಚಿತ್ತಗಾಂಗ್‌ನಲ್ಲಿ ದೇವಾಲಯಗಳನ್ನು ಸುಟ್ಟಿದ್ದಾರೆ. ಈ ಹಿಂದೆ ಅಹ್ಮದೀಯ ಸಮುದಾಯದ ಮಸೀದಿಗಳು, ದೇವಾಲಯ, ಚರ್ಚ್, ಮಠಗಳು ಮತ್ತು ಮನೆಗಳ ಮೇಲೆ ದಾಳಿ ಮಾಡಿ ಎಲ್ಲವನ್ನೂ ಧ್ವಂಸ ಮಾಡಲಾಗಿದೆ. ಎಲ್ಲಾ ಸಮುದಾಯದ ಜನರ ಜೀವನ ಮತ್ತು ಆಸ್ತಿಯ ಸುರಕ್ಷತೆಯನ್ನು ಖಾತ್ರಿಪಡಿಸಬೇಕು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

Share This Article