ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ (KVN Productions) ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ನಿರ್ಮಾಣ ಹಾಗೂ ವಿತರಣೆಯಲ್ಲಿ ದೊಡ್ಡ ಹೆಸರು ಮಾಡಿರುವ ಈ ಸಂಸ್ಥೆ ಈಗ ಟಾಲಿವುಡ್ (Tollywood) ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಅವರಿಗೆ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ. ಅಂದಹಾಗೆ ಬಹುನಿರೀಕ್ಷಿತ ಟಾಕ್ಸಿಕ್, ಕೆಡಿ ಸಿನಿಮಾ ನಿರ್ಮಿಸುತ್ತಿರುವ ಕೆವಿಎನ್ ಸಂಸ್ಥೆಯಿಂದ ಮತ್ತೊಂದು ಹೊಸ ಅಧ್ಯಾಯ ಶುರುವಾಗಲಿದೆ.
ಕೆವಿಎನ್ ಸಂಸ್ಥೆ ತಮಿಳಿನಲ್ಲಿ ದಳಪತಿ ವಿಜಯ್ ನಟನೆಯ `ಜನ ನಾಯಗನ್’ ಚಿತ್ರ ನಿರ್ಮಾಣ ಮಾಡುವ ಮೂಲಕ ತಮಿಳು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ತೆಲುಗು ಚಿತ್ರರಂಗದತ್ತ ಮುಖ ಮಾಡಿರುವ ಕೆವಿಎನ್ ಸಂಸ್ಥೆ, ಚಿರಂಜೀವಿ ಅವರ 158ನೇ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಮೆಗಾಸ್ಟಾರ್ ಚಿರಂಜೀವಿ ಅವರ 70ನೇ ವರ್ಷದ ಹುಟ್ಟುಹಬ್ಬದ ವಿಶೇಷವಾಗಿ ಈ ಪ್ರಾಜೆಕ್ಟ್ ಅನೌನ್ಸ್ ಮಾಡಲಾಗಿದೆ. ಈ ಹಿಂದೆ `ವಾಲ್ತೇರು ವೀರಯ್ಯ’ ಸಿನಿಮಾ ಮಾಡಿದ್ದ ಬಾಬಿ ಕೊಲ್ಲಿ ಮತ್ತೊಮ್ಮೆ ಚಿರುಗೆ ಆ್ಯಕ್ಷನ್‍ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ಡೆವಿಲ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
ಚಿರಂಜೀವಿ-ಬಾಬಿ-ಕೆವಿಎನ್ ಕಾಂಬಿನೇಷನ್ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ಮೂಡಿ ಬರಲಿದೆ. ಈ ಚಿತ್ರವನ್ನು ದಸರಾಗೆ ಲಾಂಚ್ ಮಾಡಲು ಚಿತ್ರತಂಡ ಭರ್ಜರಿ ಪ್ಯಾನ್ ಹಾಕಿಕೊಂಡಿದ್ದು, ವರ್ಷದ ಕೊನೆಗೆ ಶೂಟಿಂಗ್ ಆರಂಭ ಮಾಡಲು ಸಿದ್ಧತೆ ಮಾಡಿಕೊಂಡಿದೆಯಂತೆ. ಮೆಗಾಸ್ಟಾರ್ ಜೊತೆ ಸಿನಿಮಾ ಮಾಡಲು ಕೈಜೋಡಿಸುವ ಮೂಲಕ ಟಾಲಿವುಡ್‍ಗೂ ಕೆವಿಎನ್ ನಿರ್ಮಾಣ ಸಂಸ್ಥೆ ಎಂಟ್ರಿಕೊಟ್ಟಿದೆ. ಇದನ್ನೂ ಓದಿ: ದರ್ಶನ್ ಜೈಲಲ್ಲಿ – `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್