Connect with us

Chitradurga

ಹಾಸನದಲ್ಲಿ ವಾರದಲ್ಲಿಯೇ 1,579 ಜನಕ್ಕೆ ಸೋಂಕು – ಚಿತ್ರದುರ್ಗದಲ್ಲಿ ಕೋವಿಡ್ ಶತಕ

Published

on

ಹಾಸನ/ಚಿತ್ರದುರ್ಗ: ಬೆಂಗಳೂರು ಹೊರತು ಪಡಿಸಿ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಕೊರೊನಾ ಸುನಾಮಿ ಅಪ್ಪಳಿಸುತ್ತಿದೆ. ಹಾಸನ ಜಿಲ್ಲೆಯಲ್ಲಿ ಕಳೆದು ಒಂದು ವಾರದಲ್ಲಿಯೇ 1,579 ಜನ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇತ್ತ ಕೋಟೆ ನಾಡು ಚಿತ್ರದುರ್ಗದಲ್ಲಿ ಮಹಾಮಾರಿ ಶತಕ ಬಾರಿಸಿದೆ.

ಹಾಸನ: ಜಿಲ್ಲೆಯಲ್ಲಿ ಎರಡನೇ ಅಲೆಯ ಅಬ್ಬರ ಹೆಚ್ಚಾಗಿದ್ದು, ಕೊರೊನಾ ಪಾಸಿಟಿವ್ ಪ್ರಕರಣ ಹಾಗೂ ಸಾವಿನ ಪ್ರಕರಣಗಳೂ ಹೆಚ್ಚಾಗ್ತಿದೆ. ಕಳೆದ ಒಂದು ವಾರದಲ್ಲಿ 1,579 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ. 677 ಮಂದಿ ಡಿಸ್ಚಾರ್ಜ್ ಆಗಿದ್ದು, ಕೋವಿಡ್ ಸೋಂಕಿನ ಖಚಿತ ಪ್ರಮಾಣ ಶೇ.10.15ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಡಿಹೆಚ್‍ಓ ಮಾತನಾಡಿ, ದಿನಕ್ಕೆ 10 ಸಾವಿರದಂತೆ ಕೊರೊನಾ ಲಸಿಕೆ ಹಾಕಲಾಗುತ್ತಿದೆ, 45 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆ ಪಡೆದು, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 31,936 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 29,729 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 504 ಮಂದಿ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಈವರೆಗೆ ಮಂದಗತಿಯಲ್ಲಿ ಏರಿಕೆ ಕಾಣುತಿದ್ದ ಕೊರೊನ ಸೋಂಕು ಇಂದು ಒಂದೇ ದಿನ 110 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,033 ಕ್ಕೆ ಏರಿಕೆಯಾಗಿದೆ.

ಕೊರೊನ ಎರಡನೇ ಅಲೆ ಆರಂಭವಾದಾಗಿನಿಂದ ಕೇವಲ ಎರಡಂಕಿ ದಾಟದ ಕೋವಿಡ್, ಇಂದು ದಿಡೀರ್ ಅಂತ ನೂರರ ಗಡಿ ದಾಟಿದೆ. ಜಿಲ್ಲೆಯ ಆರು ತಾಲೂಕುಗಳಲ್ಲೂ ಸೋಂಕು ಹೆಚ್ಚಾಗುರತ್ತಿದ್ದು, ಚಿತ್ರದುರ್ಗ ತಾಲೂಕಿನಲ್ಲಿ 34, ಚಳ್ಳಕೆರೆ 19, ಹಿರಿಯೂರು 18, ಹೊಳಲ್ಕೆರೆ 3, ಹೊಸದುರ್ಗ 16, ಮೊಳಕಾಲ್ಮುರು ತಾಲೂಕಿನಲ್ಲಿ 08 ಹಾಗೂ ಹೊರ ಜಿಲ್ಲೆಯ 12 ಪ್ರಕರಣಗಳು ಸೇರಿದಂತೆ ಒಟ್ಟು 110 ಕೋವಿಡ್ ಪ್ರಕರಣಗಳು ಇಂದು ದೃಢಪಟ್ಟಿವೆ. ಇನ್ನು ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 11 ಜನರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಒಟ್ಟು 2,412 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದೂ, ಅವರಲ್ಲಿ 110 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದೂ, ಇದುವರೆಗೂ ಒಟ್ಟು 70 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 15,444 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 519 ಸಕ್ರಿಯ ಪ್ರಕರಣಗಳು ಇವೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,28,122 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಅವರಲ್ಲಿ ಈವರೆಗೆ 3,93,329 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,75,361 ಜನರ ವರದಿ ನೆಗೆಟಿವ್ ಅಂತ ಬಂದಿದೆ. ಉಳಿದ 1230 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *