ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಚಿಕಿತ್ಸೆ ಫಲಿಸದೇ ಇದೀಗ ಕೋಲಾರ (Kolar) ಮೂಲದ ಮಧುಸೂದನ್(24) ಮೃತಪಟ್ಟಿದ್ದಾರೆ. ಪಿಎಸ್‍ಐ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದ ಮಧುಸೂದನ್, ಸ್ನೇಹಿತ ಭೀಮಾಶಂಕರ ಕುಟುಂಬದ ಜೊತೆ ಟ್ರಿಪ್‍ಗೆ ಬಂದಿದ್ದರು.
ಚಿತ್ರದುರ್ಗ (Accident in Chitradura) ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ವಿಜಯಪುರದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇದನ್ನೂ ಓದಿ: ಭೀಕರ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ
ನಿದ್ದೆ ಮಂಪರು, ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Web Stories