ಬೆಂಗಳೂರು: ಚಿತ್ರದುರ್ಗ ಜಿಲ್ಲಾ ಬಿಜೆಪಿ (BJP) ಮಾಜಿ ಅಧ್ಯಕ್ಷ ಸಿದ್ದೇಶ್ ಯಾದವ್ (46) ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ (Bengaluru BJP Office) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಿರಿಯೂರು ತಾಲೂಕಿನ ಸಿದ್ದೇಶ್ ಯಾದವ್ (Siddesh Yadav) ಜಿಲ್ಲಾ ಪ್ರಭಾರಿಗಳ ಸಭೆಗೆ ಪಾಲ್ಗೊಳ್ಳಲು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ್ದರು. ಮಧ್ಯಾಹ್ನ ಸಭೆ ಮುಗಿಸಿ ಹೊರಗೆ ಬಂದಾಗ ಸಿದ್ದೇಶ್ ಯಾದವ್ ಕುಸಿದು ಬಿದ್ದಿದ್ದಾರೆ. ಇದನ್ನೂ ಓದಿ: ಸಿಎಂ ಕಚೇರಿಯಲ್ಲಿ ಕೆಲಸ ಆಗಬೇಕಾದ್ರೆ 30 ಲಕ್ಷ ಲಂಚ ಕೊಡಬೇಕು: ಕುಮಾರಸ್ವಾಮಿ
ಕುಸಿದು ಬಿದ್ದ ಅವರನ್ನು ಕೂಡಲೇ ಕೆ.ಸಿ.ಜನರಲ್ ಆಸ್ಪತ್ರೆಗೆ (KC Generel Hospital) ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಸಿದ್ದೇಶ್ ಯಾದವ್ ಒಬಿಸಿ ಮೋರ್ಛಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದರು.
Web Stories